ಆಗುಂಬೆ ಆಯ್ತು, ಈಗ ಶಿರಾಡಿಯಲ್ಲಿ ಸುರಂಗದ ಚರ್ಚೆ | ಮಹತ್ವದ ಅಪ್‌ಡೇಟ್‌

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 14, 2025 ‌‌ ‌‌

ಆಗುಂಬೆ ಘಾಟಿ ಸಮೀಪ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಈಗಾಗಲೇ ಪ್ರಾಥಮಿಕ ಪ್ರಕ್ರಿಯೆಗಳು ನಡೆಯುತ್ತಿದೆ. ಇದರ ನಡುವೆ  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಯೋಜನೆಗೆ ಚಾಲನೆ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರ ಮುಂಧಾಗಿದೆ. 

- Advertisement -

ಈ ಸಂಬಂಧ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿದೆ. ಸುರಂಗ ಮಾರ್ಗ ನಿರ್ಮಾಣಕ್ಕೆ ಅನುದಾನ ನೀಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಈ ಸಭೆಯಲ್ಲಿ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ 25 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಿಸುವ ಅಗತ್ಯ ಇದೆ, ಈ ಬಗ್ಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದ್ದು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಬೇಡಿಕೆ ಸಲ್ಲಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

Share This Article