SHIVAMOGGA | MALENADUTODAY NEWS | ಮಲೆನಾಡು ಟುಡೆ Dec 4, 2024
ಫೆಂಗಲ್ ಚಂಡಮಾರುತದ ಅಬ್ಬರ ಮಲೆನಾಡ ಮೇಲೆ ಕಡಿಮೆಯಾಗಿದೆ. ನಿನ್ನೆ ಸಂಜೆ IMD BANGALORE ಬಿಡುಗಡೆ ಮಾಡಿರುವ ಹವಾಮಾನ ಮುನ್ಸೂಚನೆಯ ಪ್ರಕಾರ, ಇವತ್ತು ಮತ್ತು ನಾಳೆ ಮತ್ತು ನಾಡಿದ್ದು ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದರೆಡು ಸ್ಥಳಗಳಲ್ಲಿ ಮಳೆಯಾಗುವ ಸೂಚನೆ ಇದೆ.
04 ಡಿಸೆಂಬರ್ 2024 | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮತ್ತು ಬೀದರ್, ಕಲಬುರ್ಗಿ, ಯಾದಗಿರಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
05 ಡಿಸೆಂಬರ್ 2024 | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಾವಣಗೆರೆ ಹಾಗೂ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

06 ಡಿಸೆಂಬರ್ 2024 | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳು. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
07 ಡಿಸೆಂಬರ್ 2024 | ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಮತ್ತು ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮುಂತಾದ ಕಡೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚು. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ ಜಿಲ್ಲೆಗಳು. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ಇನ್ನೂ ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಆಯ್ದ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ° C ಮತ್ತು 20 ° C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತ್ತ ಹವಾಮಾನ ಇಲಾಖೆಯ ಆಪ್ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗರಿಷ್ಟ 27 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಇರಲಿದ್ದು ಕನಿಷ್ಟ 20 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು,ಉಳಿದಂತೆ ದಿನವಿಡಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
SUMMARY | Today weather forecast , Dakshina Kannada, Udupi, Uttara Kannada, Bidar, Kalaburagi, Yadgir, Raichur, Bagalkot, Gadag, Haveri, Dharwad, Belagavi, Ballari, Vijayanagar, Chitradurga, Tumakuru, Davangere, Shivamogga, Chikkamagaluru, Hassan, Kodagu districts, Weather Forecast, Meteorological Department, Shivamogga weather report,
KEY WORDS | Today weather forecast , Dakshina Kannada, Udupi, Uttara Kannada, Bidar, Kalaburagi, Yadgir, Raichur, Bagalkot, Gadag, Haveri, Dharwad, Belagavi, Ballari, Vijayanagar, Chitradurga, Tumakuru, Davangere, Shivamogga, Chikkamagaluru, Hassan, Kodagu districts, Weather Forecast, Meteorological Department, Shivamogga weather report,