SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 22, 2024 karnataka rain alert
ಶಿವಮೊಗ್ಗವೂ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಮೂರುದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹವಾಮಾನ ಇಲಾಖೆ ಬೆಂಗಳೂರು ಇದರ ಅಧಿಕೃತ ವೆಬ್ಸೈಟ್ ಪ್ರಕಾರ, ಇದೇ 24 ನೇ ತಾರೀಖು ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.

ಉಳಿದಂತೆ ಇವತ್ತು ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನೂ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ
ನಾಳೆ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಹಾಗೆಯೇ ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನಾಡಿದ್ದು ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ