ಕನ್ನಡಿಗರಿಗೆ ಬಿಗ್‌ ಗುಡ್‌ ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ!

13

SHIVAMOGGA | MALENADUTODAY NEWS | ಮಲೆನಾಡು ಟುಡೆ  Mar 3, 2025 ‌‌  

ಕನ್ನಡದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ವ್ಯಾಪ್ತಿಯಲ್ಲಿ ತಯಾರೂ ಮಾಡುವ ಹಾಗೂ ಮಾರಾಟವಾಗುವ ಎಲ್ಲಾ ಕೈಗಾರಿಕಾ ಹಾಗೂ ಗ್ರಾಹಕ ಉತ್ಪನ್ನಗಳ ಹೆಸರುಗಳು ಕನ್ನಡದಲ್ಲಿಯು ಇರತಕ್ಕದ್ದು ಎಂದು ಆದೇಶ ಹೊರಡಿಸಲಾಗಿದೆ. 

- Advertisement -

ಈ ಬಗ್ಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸೇವೆಗಳು ಸಮನ್ವಯ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿಯವರು ಆದೇಶ ಹೊರಡಿಸಿದ್ದಾರೆ. ಈ ಆದೇಶದಲ್ಲಿ ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. 

ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ, ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ. 

ಈ ಸುತ್ತೋಲೆಯಿಂದಾಗಿ ಗ್ರಾಹಕರು ತಾವು ಖರೀದಿಸುವ ಉತ್ಪನ್ನದ ವಿವರ ಹಾಗೂ ಅದರ ಬಗೆಗಿನ ಮಾಹಿತಿಯನ್ನು ಕನ್ನಡದಲ್ಲಿಯು ಆಯಾ ಪ್ರಾಡಕ್ಟ್‌ ಮೇಲೆಯೇ ಕಾಣಬಹುದಾಗಿದೆ. ಗೊತ್ತಿರದ ಯಾವುದೋ ಭಾಷೆಯಲ್ಲಿ ಹಾಕಲಾಗುವ ಮಾಹಿತಿಯನ್ನು ಅರಿಯದೆ ಖರೀದಿಸುವ ಪ್ರಮೇಯ ಇದರಿಂದ ತಪ್ಪಲಿದೆ. 

Share This Article
Leave a Comment

Leave a Reply

Your email address will not be published. Required fields are marked *