SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 14, 2025

14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅದಕ್ಕೆ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತಂದಿದೆ.
ಅಂತಹ ಬಾಲಕಾರ್ಮಿಕರು ಯಾವುದೇ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವುದು ಕಂಡುಬಂದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ರೂ.50,000 ವರೆಗೆ ದಂಡ ಹಾಗೂ 2 ವರ್ಷದವರೆಗಿನ ಸೆರೆಮನೆ ವಾಸದ ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗೂ ಕೆಲಸಕ್ಕೆ ಸೇರಿಸಿದ ಪಾಲಕರ ಮೇಲೆಯೂ ದಂಡ ವಿಧಿಸಲಾಗುವುದು. ಇಂತಹ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರು ಜಿಲ್ಲೆಯಲ್ಲಿ ಎಲ್ಲಿಯಾದರೂ ಕಂಡು ಬಂದರೆ ಮಕ್ಕಳ ಸಹಾಯವಾಣಿ 1098/112 ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬಹುದು.

ಜಿಲ್ಲೆಯಾದ್ಯಂತ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಕಾರ್ಯಾಚರಣೆ ನಡೆಯುತ್ತಿದ್ದು ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಇತ್ತೀಚೆಗೆ ಶಿವಮೊಗ್ಗದ ಪ್ರತಿಷ್ಟಿತ ಹೋಟೆಲ್ ಹಾಗೂ ಶಿಕಾರಿಪುರ ತಾಲ್ಲೂಕಿನ ಆಟೋಮೊಬೈಲ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳ ಭೇಟಿ ಮಾಡಿ ಬಾಲಕರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಅಧಿಕಾರಿಗಳು ಸ್ಥಳ ಭೇಟಿ ಮಾಡಿ ಬಾಲಕರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿರುತ್ತಾರೆ.
ಬಾಲಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದುದನ್ನು ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಮಾಲೀಕರ ವಿರುದ್ದ ಬಾಲಕಾರ್ಮಿಕ/ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ಕಾಯ್ದೆ-1986 ಹಾಗೂ ತಿದ್ದುಪಡಿ ಕಾಯ್ದೆ 2016)ರಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕಾರ್ಮಿಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
SUMMARY | The government has enacted a stringent law to employ adolescent labourers in hazardous industries as it is a punishable offence.
KEYWORDS | child labourers, hazardous industries, punishable offence,