SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 17, 2025
ಚಿಕ್ಕಮಗಳೂರು | ಕೆ,ಎಫ್,ಡಿ, ಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ.
ಈ ಹಿಂದೆ ಜ್ವರ ಬಂದ ಹಿನ್ನಲೆ ಮಹಿಳೆಯನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅಲ್ಲಿ ರಕ್ತ ಪರೀಕ್ಷೆ ನಡೆಸಿದಾಗ ಮಹಿಳೆಗೆ ಕೆ,ಎಫ್,ಡಿ ಸೋಂಕು ಇರುವುದು ದೃಡಪಟ್ಟಿದೆ. ನಂತರ ಆಸ್ಪತ್ರೆಯಲ್ಲಿ ಸೋಂಕಿತೆಗೆ ಚಿಕಿತ್ಸೆಯನ್ನು ಮುಂದುವರೆಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಕಳೆದ ರಾತ್ರಿ ಸಾವನ್ನಪ್ಪಿದ್ದಾರೆ.
ಈ ಬಾರಿ ಮಲೆನಾಡು ಭಾಗದಲ್ಲಿ ಕೆ ಎಫ್ ಡಿ ಸೋಂಕು ಹೆಚ್ಚಾಗಿ ಕಂಡು ಬರುತ್ತಿದ್ದು, ಬೇಸಿಗೆಯಲ್ಲಿ ಹಳ್ಳಿಯ ಜನರು ಎಚ್ಚರಿಕೆಯಿಂದಿರುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
SUMMARY | A 65-year-old woman, who was admitted to a hospital with K, F, D disease, died at Kattinamane village in Koppa taluk of Chikmagalur district.
KEYWORDS | KFD disease,Chikmagalur, woman, died,