ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್​ ಪ್ರತಿಭಟನೆ | ಆರ್ ಅಶೋಕ್​ ಹೇಳಿದ್ದೇನು

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 9, 2025

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿರುವುದನ್ನು ವಿರೋದಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಇಂದು ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್  ವತಿಯಿಂದ  ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನಾಕಾರರು ವಿಪಕ್ಷ ನಾಯಕ ಆರ್​ ಅಶೋಕ್​ ಹಾಗೂ ಬಿವೈ ವಿಜಯೇಂದ್ರ ಅವರ ಫೋಟೋವನ್ನು ಹಿಡಿದು ವಿಜಯೇಂದ್ರ ಅಶೋಕ ಎಲ್ಲಿದೀರಪ್ಪ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ದ ಹೋರಾಡ್ರಪ್ಪಾ ಎಂದು ಪ್ರತಿಭಟನೆ ಮಾಡಿದರು. 

ಈ ಸಂದರ್ಭದಲ್ಲಿ ಕಾಂಗ್ರೆಸ್​ ಜಿಲ್ಲಾ ಅಧ್ಯಕ್ಷರಾದ ಆರ್​ ಪ್ರಸನ್ನ ಕುಮಾರ್ ಮಾತನಾಡಿ ಕೇಂದ್ರ ಸರ್ಕಾರ ಪದೇಪದೇ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಗದ ಪ್ರಹಾರ ಮಾಡುತ್ತಿದೆ.ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್  ತೀವ್ರವಾಗಿ ಖಂಡಿಸುತ್ತಿದೆ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ಮೇಲೆ ತೆರಿಗೆಯ ಅಧಿಕ ಹೊರೆ ಹೊರಿಸುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಜೀವನ ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ.ಎಂದು ಆಕ್ರೋಶ ವ್ಯಕ್ತ ಪಡಿಸಿದರು. 

ನಂತರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್ ರಮೇಶ್ ರವರು ಮಾತನಾಡಿ ಇದೀಗ ಕೇಂದ್ರ ಸರ್ಕಾರ ಮತ್ತೆ ಡಿಸೇಲ್ ಮೇಲೆ ಲೀಟರ್​​ಗೆ 2 ರೂ. ಅಬಕಾರಿ ಶುಲ್ಕ ಹೆಚ್ಚಿಸಿದೆ. ಎಲ್ ಪಿ ಜಿ  ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಸಿ ಎನ್ ಜಿ ದರವನ್ನೂ ಪ್ರತಿ ಕೆ ಜಿ ಗೆ 1 ರೂ. ಹೆಚ್ಚಿಸಿದೆ. ಡೀಸೆಲ್, ಅಡುಗೆ ಅನಿಲ  ಸಿ ಎನ್ ಜಿ ದರ ಹೆಚ್ಚಳ ಮಾಡಿರುವುದು ಇತರ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಲಿದೆ. 

ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್​​ಗೆ ರೂ. 2 ಹೆಚ್ಚಿಸುವ ಮತ್ತು ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ರೂ. 50 ಹೆಚ್ಚಿಸುವ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಜಿಲ್ಲಾ ಯುವ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

SUMMARY | Shimoga district Congress staged a protest at Gopi Circle in the city demanding the dismissal of the BJP government at the Centre.

KEYWORDS | Shimoga  district, Congress protest,  Gopi Circle, BJP government, 

Share This Article
Leave a Comment

Leave a Reply

Your email address will not be published. Required fields are marked *