SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 4, 2025

ಶಿವಮೊಗ್ಗ | ಸರ್ಕಾರಿ ಅಧಿಕಾರಿ ಹಾಗೂ ನೌಕರರಿಗೆ 2024-25 ನೇ ಸಾಲಿನ 2 ವರ್ಷಗಳ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.
ಈ ಕುರಿತು ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಆರ್ ಮೋಹನ್ ಕುಮಾರ್ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಉತ್ತಮ ಸೇವೆ ಹಾಗೂ ಸಾಧನೆಗೈದ ಸರ್ಕಾರಿ ಅಧಿಕಾರಿಗಳಿಗೆ ಈ ಪ್ರಶಸ್ತಿಯನ್ನು ನೀಡುತ್ತಿದ್ದೇವೆ. ಅರ್ಹರು ಏಪ್ರಿಲ್ 14 ರ ಒಳಗಾಗಿ https://sarvothamaawards.karnataka.gov.in ಈ ಲಿಂಕ್ ಬಳಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು.

ಜಿಲ್ಲಾ ಮಟ್ಟದ ಪ್ರಶಸ್ತಿಯ ಬಹುಮಾನದ ಮೊತ್ತ 10 ಸಾವಿರ ರೂಪಾಯಿ ಇರಲಿದ್ದು, ರಾಜ್ಯ ಮಟ್ಟದ ಪ್ರಶಸ್ತಿಯ ಬಹುಮಾನ ಮೊತ್ತ 50 ಸಾವಿರ ರೂಪಾಯಿ ಇರಲಿದೆ ಎಂದರು.
ಏಪ್ರಿಲ್ 05 ಮತ್ತು 6 ಸರ್ಕಾರಿ ನೌಕರರ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ
2024-25ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏಪ್ರಿಲ್ 05 ಮತ್ತು 06 ರಂದು ಶಿವಮೊಗ್ಗದ ನೆಹರೂ ಕ್ರೀಡಾಂಗಣ, ಸರ್ಕಾರಿ ನೌಕರರ ಭವನ ಮತ್ತು ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ರಾಜ್ಯ ಸರ್ಕಾರದ ಖಾಯಂ ಸರ್ಕಾರಿ ನೌಕರರು ಏಪ್ರಿಲ್ 05 ರ ಬೆಳಗ್ಗೆ 9.00 ಗಂಟೆಯಿಂದ ನೆಹರೂ ಕ್ರೀಡಾಂಗಣದಲ್ಲಿ ನೊಂದಣಿ ಮಾಡಿಕೊಳ್ಳುಬೇಕು. ಈ ಕ್ರೀಡಾಕೂಟದ ಉದ್ಘಾಟನೆಯನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾمو ಮಧು ಬಂಗಾರಪ್ಪನವರು ನೆರವೇರಿಸಲಿದ್ದು, ಶಾಸಕರಾದ ಎಸ್.ಎನ್.ಚನ್ನಬಸಪ್ಪನವರು ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಂಸದರಾದ ಬಿ.ವೈ.ರಾಘವೇಂದ್ರರವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಪಾಶ್ಚಿಮಾತ್ಯ ಗಾಯನ ಮತ್ತು ನೃತ್ಯ ಸ್ಪರ್ಧೆಗಳನ್ನು ಸೇರ್ಪಡೆಗೊಳಿಸಲಾಗಿದೆ.
SUMMARY | Applications have been invited for the state and district level Sarvottam Seva Puraskar for two years for the year 2024-25 for government officers and employees.
KEYWORDS | Sarvottam Seva Puraskar, government employees,