ಗೃಹಲಕ್ಷ್ಮಿ ಯೋಜನೆ ಕಂತಿನ ಬಾಬ್ತು ಯಾವಾಗ ರಿಲೀಸ್‌ !? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೀಡಿದ್ರು ಸುಳಿವು |

13

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 22, 2025 ‌‌ 

ಇನ್ನೊಂದು ವಾರದಲ್ಲಿ ಅಂದರೆ ಶಿವರಾತ್ರಿ ಹೊತ್ತಿಗೆ ಗೃಹಲಕ್ಷ್ಮಿ ಯೋಜನೆಯ ಹಣ ರಿಲೀಸ್‌ ಆಗುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ gruhalakshmi scheme ನ ಹಣವೂ ಸಂದಾಯವಾಗಲಿದೆ ಎಂದಿದ್ದಾರೆ. 

ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿದೆ. ಅಲ್ಲಿಂದ ಶಿಶು ಯೋಜನಾಭಿವೃದ್ಧಿ ಅಧಿಕಾರಿ (ಸಿಡಿಪಿಒ) ಖಾತೆಗೆ ಹಣ ವರ್ಗಾವಣೆಯಾಗಲಿದೆ. ಆನಂತರ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ಮಾಹಿತಿ ನೀಡಿದರು. 

ಇದೇ ವೇಳ ಅಪಘಾತವಾದ್ದರಿಂದ ವಿಶ್ರಾಂತಿಯಲ್ಲಿದ್ದೆ. ಈ ಹಿನ್ನೆಲೆಯಲ್ಲಿ ಹಣ ಬಿಡುಗಡೆಯಾಗುವುದು ತಡವಾಗಿದೆ. ಇದೀಗ ಅಧಿಕಾರಿಳಿಗೆ ಆದೇಶ ನೀಡಲಾಗಿದೆ ಎಂದರು

SUMMARY |  gruhalakshmi scheme money release shortly, lakshmi hebbalkar

KEY WORDS |‌ gruhalakshmi scheme money release shortly, lakshmi hebbalkar

Share This Article