Sunday, 18 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಗ್ರಾಮೀಣ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಇರಲಿ | ಎಸ್.ಮಧು ಬಂಗಾರಪ್ಪ

131
Last updated: February 24, 2025 11:21 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 24, 2025

ಶಿವಮೊಗ್ಗ|  ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಹಾಗೂ ಸಹಕಾರಿ ಸಂಸ್ಥೆಗಳು, ಕೈಗಾರಿಕಾ ಉದ್ಯಮಗಳು, ವ್ಯಾಪಾರ , ವಾಣಿಜ್ಯೋದ್ಯಮಿಗಳು, ರೌಂಡ್ ಟೇಬಲ್, ವಿವಿಧ ಸಂಸ್ಥೆಗಳು, ಹಳೇ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ‘ ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಹಾಗೂ ಸಿಎಸ್‌ಆರ್ ಯೋಜನೆಗಳ ಅನುಷ್ಟಾನ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ 3 ವಿಭಾಗಗಳಿವೆ. ಒಂದು ಸಿಎಸ್‌ಆರ್ ನಿಧಿ, ದಾನಿಗಳು ಮತ್ತು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ದಾನಿಗಳಾಗಿದ್ದು, ರಾಜ್ಯದಲ್ಲಿ ಅನೇಕ ಶಾಲೆಗಳು ಅಭಿವೃದ್ದಿ ಕಾಣುತ್ತಿವೆ.ಶಿಕ್ಷಣ ಇಲಾಖೆಯಲ್ಲಿ 46 ಸಾವಿರ ಸರ್ಕಾರಿ ಶಾಲೆಗಳು ಸೇರಿದಂತೆ 76 ಸಾವಿರ ಸರ್ಕಾರಿ ಅನುಸರ್ಕಾರಿ-ಅನುದಾನಿತ ಖಾಸಗಿ ಶಾಲೆ ಕಾಲೇಜು ಇವೆ. 1.8 ಕೋಟಿ ವಿದ್ಯಾರ್ಥಿಗಳು ಇದ್ದಾರೆ. 1.8 ತಿಂಗಳಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಹಳೇ ವಿದ್ಯಾರ್ಥಿಗಳ 36 ಸಾವಿರ ವಾಟ್ಸಾಪ್ ಗುಂಪುಗಳನ್ನು ರಚಿಸಲಾಗಿದೆ. ಮುಖ್ಯಮಂತ್ರಿಗಳು ತಮ್ಮ ಸಂಬಳದಲ್ಲಿ ರೂ. 10 ಲಕ್ಷವನ್ನು ಅವರು ಓದಿದ ಶಾಲೆಗೆ ನೀಡಿದ್ದಾರೆ. ನನ್ ಸಂಬಳದಲ್ಲಿ ರೂ. 10 ಲಕ್ಷವನ್ನ ನನ್ನ ಊರಿನ ಶಾಲೆಯ ಪೀಠೋಪಕರಣಕ್ಕೆ ನೀಡಿದ್ದೇನೆ. ಸಿಎಸ್‌ಆರ್ ಅಡಿಯಲ್ಲಿ ಸಾಕಷ್ಟು ಶಾಲೆಗಳ ಅಭಿವೃದ್ದಿ ಆಗುತ್ತಿದ್ದು ಅದರಲ್ಲಿ ಗರಿಷ್ಟ ಹಣ ರೂ. 1591 ಕೋಟಿ ಅಜೀಂ ಪ್ರೇಂಜೀ ಫೌಂಡೇಶನ್‌ನಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಮೊಟ್ಟೆಗಾಗಿ ನೀಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರದಿಂದ ಉಚಿತವಾಗಿ 57 ಲಕ್ಷ ಮಕ್ಕಳಿಗೆ ಹಾಲು, ರಾಗಿ ಮಾಲ್ಟ್, 2 ಜೊತೆ ಸಮವಸ್ತ್ರ, ಶೂ ಸಾಕ್ಸ್ ಉಚಿತ ಊಟ, ಮೊಟ್ಟೆ ಹಾಗೂ ಕಲಿಕೆಯಲ್ಲಿ ಮುಂದೆ ಬರಲು ಶಾಲೆಗಳಿಗೆ ಉಚಿತ ವಿದ್ಯುತ್, ನೀರು, ಗ್ರಂಥಾಲಯಕ್ಕೆ ಉಚಿತ ವಿದ್ಯುತ್ , ಸಂಜೆ ವಿಶೇಷ ಕ್ಲಾಸು, ಪರೀಕ್ಷಾ ಪಾವಿತ್ರ‍್ಯತೆ ಕಾಪಾಡಲು ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 42 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಮಕ್ಕಳ ಓದಿಗೆ ಶಿಕ್ಷಕರು, ಅಧಿಕಾರಿಗಳಿಂದ ಉತ್ತಮ ಸಹಕಾರ ಸಿಗ್ತಿದೆ. ಇದೀಗ ಶಾಲೆಯಲ್ಲಿ ಕೌಶಲ್ಯ ಕಲಿಸಲಾಗುತ್ತಿದೆ. ಅದೇ ರೀತಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಸಹಕಾರ ಲಭಿಸುತ್ತಿದೆ. ಸಂಘ ಸಂಸ್ಥೆಗಳ ಸಹಕಾರ ಮುಂದೆಯೂ ಇನ್ನೂ ಹೆಚ್ಚಾಗಿ ಸಿಗಲಿ ಎಂದ ಅವರು ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಿಎಸ್‌ಆರ್ ನಿಧಿಯನ್ನು ವಿದ್ಯಾಭ್ಯಾಸ ಕ್ಕೆ ನೀಡಲು ಕೋರಿದ್ದಾರೆ. ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಹಾಗೂ ಹಳೇ ವಿದ್ಯಾರ್ಥಿಗಳು, ದಾನಿಗಳು ಅನುಕೂಲ ಮಾಡಿಕೊಡುತ್ತಾರೆಂಬ ವಿಶ್ವಾಸ ಇದೆ. 

ಎಡಿಬಿ ಬ್ಯಾಂಕ್ ಕೆಪಿಎಸ್ ಶಾಲೆ ಮಾಡಲು ರೂ. 2 ಸಾವಿರ ಕೋಟಿ ನೀಡಿದೆ. ಗ್ರಾಮೀಣ ಭಾಗದ ಎಷ್ಟೋ ಜನರು ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ತರಕಾರಿ ಮಾರುವ ಸಂಜೀವ್ ಎಂಬುವವರು ಸಹ ತಾವು ಓದಿದ ಶಾಲೆಗೆ ರೂ. 2 ಲಕ್ಷ ವೆಚ್ಚದಲ್ಲಿ ಹೊಸ ಧ್ವಜ ನಿರ್ಮಿಸಿದ್ದಾರೆ. ಇದೊಂದು ಉದಾಹರಣೆ ಅಷ್ಟೇ. ಇದೇ ರೀತಿ ಅನೇಕರು ಸಹಾಯ ಮಾಡಿದ್ದಾರೆ. ಹಳೇ ವಿದ್ಯಾರ್ಥಿಗಳು, ರೌಂಡ್ ಟೇಬಲ್‌ನಂತಹ ಸಂಸ್ಥೆಗಳು, ಇತರೆ ಉದ್ಯಮಗಳು ಸಹರಿಸುತ್ತಿವೆ. ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲಾಗುತ್ತಿದ್ದು, ಇದೇ ರೀತಿಯಲ್ಲಿ ನಿಮ್ಮ ಸಹಕಾರ ಇರಲಿ ಎಂದರು.

ಮುಂದಿನ ದಿನಗಳಲ್ಲಿ ಪ್ರತಿ ಗ್ರಾ.ಪಂ ಗೆ ಎರಡರಂತೆ 2000 ಕೆಪಿಎಸ್ ಶಾಲೆಗಳನ್ನು ಮಾಡುವ ಗುರಿ ಹೊಂದಲಾಗಿದೆ ಎಂದ ಅವರು ಮೊಟ್ಟ ಮೊದಲ ಬಾರಿಗೆ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಕೋಚಿಂಗ್ ನೀಡಲಾಗಿವುದು ಎಂದರು.

ದಾನಿಗಳ ಆರ್ಥಿಕ ನೆರವಿನಿಂದ ಶಾಲೆಯ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳು ಸಹಕರಿಸಿದ ವ್ಯಕ್ತಿಗಳು, ಸಂಘಟನೆಗಳ ಹೆಸರನ್ನು ಶಾಲೆಗೆ ನಾಮಕರಣ ಮಾಡಲು ಶೀಘ್ರದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದರು.

ಜಿಲ್ಲಾ ವಾಣಿಜ್ಯ ಸಂಘ ದ ಅಧ್ಯಕ್ಷ ಗೋಪಿನಾಥ್ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಮತ್ತು ಸಿಎಸ್‌ಆರ್ ಅನುದಾನ ಬಳಕೆ ಉತ್ತಮ ಕ್ರಮವಾಗಿದೆ. ರೌಂಡ್ ಟೇಬಲ್ ಇತರೆ ಸಂಸ್ಥೆಗಳು ಉತ್ತಮ ಕಾರ್ಯಕ್ರಮ ಮಾಡುತ್ತಿವೆ. ಶಿವಮೊಗ್ಗದ ಮುಖ್ಯವಾದ 3 ಕೈಗಾರಿಕಾ ಪ್ರದೇಶಗಳು ಸಿಎಸ್‌ಆರ್ ಅಡಿ ಉತ್ತಮ ಕೆಲಸ ಮಾಡುತ್ತಿದ್ದು ಮುಂದೆಯೂ ಸಹಕರಿಸಲಿವೆ ಎಂದರು.

SUMMARY | School Education and Literacy Department and District In-charge Minister S. Madhu Bangarappa appealed to the alumni, CSR and donors to always cooperate for the all-round development of rural government schools, including basic amenities.

KEYWORDS | School Education, Madhu Bangarappa,  development,  government schools,

malenadutoday add
Share This Article
Email Copy Link Print
Previous Article ಒತ್ತಡದ ಜೀವನದಲ್ಲಿ ಕ್ರೀಡೆಗಳು ನವೋಲ್ಲಾಸ ನೀಡುತ್ತವೆ | ಎಂ ಶ್ರೀಕಾಂತ್‌
Next Article DINA BHAVISHYA | ದಿನ ಭವಿಷ್ಯ | ವ್ಯಾಪಾರ, ವ್ಯವಹಾರ, ಉದ್ಯೋಗದಲ್ಲಿ ಇವತ್ತು ವಿಶೇಷ | ಇವತ್ತಿನ ರಾಶಿಫಲ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸುಳಿವು ನೀಡಿದ ಡಿಕೆಶಿ| ಯಾವಾಗ ಗೊತ್ತಾ

By 131
POLITICS

15 ದಿನದೊಳಗೆ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಘೋಷಿಸಿ | ಕೆ ಎಸ್‌ ಈಶ್ವರಪ್ಪ

By 131
POLITICS

ಕುಂಭ ಮೇಳದಲ್ಲಿ ಗಂಗೆಯಲ್ಲಿ ಮಿಂದೆದ್ದ ಕುಮಾರ್‌ ಬಂಗಾರಪ್ಪ

By 131
POLITICS

ಪೋಕ್ಸೋ ಕೇಸ್‌ | ಮತ್ತೊಮ್ಮೆ ಹೈಕೋರ್ಟ್‌ ಮೊರೆ ಹೋದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up