SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 11, 2024
ಶಿವಮೊಗ್ಗ| ಪ್ರಸ್ತುತ ತಂತ್ರಜ್ಞಾನ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಪ್ರೊಸೆಸಿಂಗ್, ಕಮ್ಯುನಿಕೇಷನ್ ಮತ್ತು ಇನ್ಫಾರ್ಮೇಷನ್ ಟೆಕ್ನಾಲಜಿ ಕುರಿತ ನಾಲ್ಕನೇ ಅಂತರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಇದೇ ಡಿ.13 ಮತ್ತು 14 ರಂದು ಎರಡು ದಿನಗಳ ಕಾಲ ಶಿವಮೊಗ್ಗದ ಜೆ.ಎನ್.ಎನ್.ಸಿ.ಇ ಕಾಲೇಜಿನ ಸರ್.ಎಂ.ವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ನಗರದ ಜೆ.ಎನ್.ಎನ್.ಸಿ.ಇ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಐಇಇಇ ಬೆಂಗಳೂರು ಮತ್ತು ಮಂಗಳೂರು ವಿಭಾಗ, ಐಇಟಿಇ ಶಿವಮೊಗ್ಗ ಕೇಂದ್ರ, ಐಇಇಇ ಕಾಮ್ ಸಾಕ್ ಬೆಂಗಳೂರು ವಿಭಾಗದ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಜೆ.ಎನ್.ಎನ್ ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಪಂಚದಲ್ಲಿ ಪ್ರಸ್ತುತ ತಂತ್ರಜ್ಞಾನ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಈ ಅಂತರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದೇವೆ. ಈ ವಿಚಾರ ಸಂಕಿರಣ ನಡೆಸಲು ವಿವಿಧೆಡೆಯಿಂದ 60 ಜನ ಭಾಗವಹಿಸಿ ತಂತ್ರಜ್ಞಾನದ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ಹಾಗೆಯೇ ನಮ್ಮ ಕಾಲೇಜಿನ 150 ಜನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದರು.

ಡಿಸೆಂಬರ್ 13 ರಂದು ಬೆಳಿಗ್ಗೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಐ ಐ ಈ ಸಿ ಪ್ರಾಧ್ಯಾಪಕರಾದ ಟಿ ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಹಾಗೆಯೇ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜೆಎಸ್ ನಾರಾಯಣ ರಾವ್ ಆಗಮಿಸಲಿದ್ದಾರೆ ಎಂದರು. ಎರಡು ದಿನಗಳ ವಿಚಾರ ಸಂಕಿರಣದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ಕ್ವಾಂಟಮ್ ಇನ್ಸಾರ್ಮೇಷನ್ ಟೆಕ್ನಾಲಜಿ ಫೋಟೊಸಿಕ್ಸ್ ಕುರಿತು ಬೆಂಗಳೂರು ಐಐಎಸ್ಸಿ ಪ್ರಾಧ್ಯಾಪಕ ಟಿ ಶ್ರೀನಿವಾಸ್ ಇಂಟರ್ನೆಟ್‌ಗಾಗಿ ಟ್ರಾನ್ಸ್ ಪೋರ್ಟ್ ಸರ್ವಿಸಸ್ ಎಪಿಐ ಪ್ರಮಾಣಿತ ವಿಷಯಬಗ್ಗೆ ಮಾಹಿತಿ ನೀಡಲಿದ್ದಾರೆ. ಇವರು ಸೇರಿದಂತೆ ಅನೇಕರು ಹಲವಾರು ತಂತ್ರಜ್ಞಾನದ ಕುರಿತು ಮಾಹಿತಿ ನೀಡಲಿದ್ದಾರೆ.
SUMMARY | The fourth International Seminar on Processing, Communication and Information Technology will be held on December 13 and 14 at Sir MV Auditorium, JNN College for two days with an aim to educate students about current technology.
KEYWORDS | JNN College, current technology, international Seminar, kannadanews,