ತೀರ್ಥಹಳ್ಳಿ ತಾಲ್ಲೂಕುನಲ್ಲಿ Assistant Technical Manager ಹುದ್ದೆಗಾಗಿ ಅರ್ಜಿ ಆಹ್ವಾನ | ವಿವರ ಓದಿ

13

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 7, 2025 ‌‌ 

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ದೇವಂಗಿ ರೈತ ಸಂಪರ್ಕ ಕೇಂದ್ರ ದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಯೊಂದು ಖಾಲಿ ಇದ್ದು, ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಈ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳ ಆಯ್ಕೆ ಬಯಸಿ ಅರ್ಜಿ ಆಹ್ವಾನಿಸಲಾಗಿದೆ. ವಿವರ ಹೀಗಿದೆ.  

- Advertisement -

 

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

 

ಶಿವಮೊಗ್ಗ ಜಿಲ್ಲೆಯ 2024-25ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ರೈತ ಸಂಪರ್ಕ ಕೇಂದ್ರದಲ್ಲಿ ಖಾಲಿಯಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ 45 ವರ್ಷ ವಯೋಮಿತಿಯುಳ್ಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವವರಿಂದ ಅರ್ಜಿ ಆಹ್ವಾನಿಸಿದೆ.

 

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರಿಂದ ಪಡೆಯಬುದು

 

ಭರ್ತಿ ಮಾಡಿದ ಅರ್ಜಿಯನ್ನು ಸ್ವವಿವರಗಳೊಂದಿಗೆ ಪದವಿ ಪ್ರಮಾಣ ಪತ್ರ, ಅಂತಿಮ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು

 

ಅರ್ಜಿಯನ್ನು ಇದೇ ಫೆಬ್ರವರಿ 15 ರೊಳಗಾಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

SUMMARY | Devangi Farmer Contact Center , raitha samparka kendra  of Tirthahalli Taluk, invited applications for the post of Assistant Technical Manager, degree in Agriculture or Agriculture related subject.

KEY WORDS | Devangi Farmer Contact Center , raitha samparka kendra  of Tirthahalli Taluk, invited applications for the post of Assistant Technical Manager, degree in Agriculture or Agriculture related subject

Share This Article
Leave a Comment

Leave a Reply

Your email address will not be published. Required fields are marked *