ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಹಂಚಿಕೊಳ್ಳಿ
WhatsApp Facebook X Telegram
ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 31, 2025

ತೀರ್ಥಹಳ್ಳಿ | ತುಂಗಾ ನದಿಯಲ್ಲಿ ಈಜಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಭವಿಸಿದೆ. 20 ವರ್ಷದ ಕಿರಣ್‌ ಮೃತಪಟ್ಟ ಯುವಕ.

ತೀರ್ಥಹಳ್ಳಿ ತಾಲೂಕಿನ ಜಿಗಳಗೋಡಿನ ನಾಲ್ವರು ಯುವಕರು ರಾಮೇಶ್ವರ ದೇವಸ್ಥಾನದ ಹಿಂಭಾಗ ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ನದಿಯಲ್ಲಿ ನೀರು ಹೆಚೇನು ಇರಲಿಲ್ಲ, ಆದರೆ  ಕಿರಣ್‌ ಈಜು ಬಾರದಿದ್ದ ಹಿನ್ನಲೆ ನೀರಿನಿಂದ ಮೇಲೆದ್ದು ಬರಲು ಸಾಧ್ಯವಾಗದೆ ದುರಾದೃಷ್ಟವಶಾತ್‌  ಸಾವನ್ನಪ್ಪಿದ್ದಾನೆ.

ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆಯಲಾಗಿದ್ದು, ಈ ಹಿನ್ನಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

SUMMARY |  A youth died while swimming in the Tunga river yesterday. 

KEYWORDS |  died,  swimming,  Tunga river, 

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor