ದೊಡ್ಡ ಸುದ್ದಿ | ಮತ್ತೆ ಏರಲಿದೆ ಹಾಲಿನ ದರ | ಹಾಲು ಖರೀದಿ ದರವೂ ಹೆಚ್ಚಳ!?

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 6, 2025 ‌‌ ‌

ಮತ್ತೊಮ್ಮೆ ಹಾಲಿನ ದರ ಹೆಚ್ಚಾಗುವ ಲಕ್ಷಣ ಸ್ಪಷ್ಟವಾಗುತ್ತಿದೆ. ಈ ಸಂಬಂಧ ನಿನ್ನೆ ದಿನ ವಿಧಾನಪರಿಷತ್‌ ಕಲಾಪದಲ್ಲಿ ಹೇಳಿಕೆ ನೀಡಿರುವ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಹಾಲು ಉತ್ಪಾದಕ ರೈತರ ಬೇಡಿಕೆ ಹಾಗೂ ಗ್ರಾಹಕರ ಹಿತ ರಕ್ಷಣೆಯನ್ನು ಗಮನಕ್ಕೆ ತೆಗೆದುಕೊಂಡು ಹಾಲಿನ ದರವನ್ನು ಹೆಚ್ಚಳ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಸದ್ಯದಲ್ಲಿಯೇ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದ ಸಚಿವರು ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ, ಹಾಲು ಉತ್ಪಾದಕ ರೈತರ ಬೇಡಿಕೆ ಹಾಗೂ ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಳ್ಳಲಾಗುವುದು ಎಂದು ಕಾಂಗ್ರೆಸ್ ನ ಉಮಾಶ್ರೀ ಅವರ ಪ್ರಶ್ನೆಗೆ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದರು.

ಇದೇ ವೇಳೆ ಹಾಲಿನ ಖರೀದಿ ದರ ಹೆಚ್ಚಿಸುವ ಸಂಬಂಧ ಇರುವ ಸಾಧಕ-ಭಾದಕಗಳ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ವ್ಯವಸ್ಥಾಪಕ ನಿರ್ದೇಶಕರುಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಾಲು ಮಹಾಮಂಡಳದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಜೊತೆ ಒಂದು ಸುತ್ತಿನ ಸಭೆ ನಡೆಸಿ ಚರ್ಚಿಸಲಾಗಿದೆ ಎಂತಲೂ ತಿಳಿಸಿದರು

Share This Article