SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 19, 2024
ಶಿವಮೊಗ್ಗ : ಗಾಜನೂರು ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ 14 ನೇ ಬ್ಯಾಚ್ ( 1999-2006)ನ ವಿದ್ಯಾರ್ಥಿಗಳ ರಜತ ಮಹೋತ್ಸವದ ಅಂಗವಾಗಿ ಡಿಸೆಂಬರ್ 22ರಂದು ಬೆಳಗ್ಗೆ 10 ಗಂಟೆಗೆ ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ತಾರಾನಾಥ್ ಹೇಳಿದರು
ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ನಮ್ಮ ನವೋದಯ ವಿದ್ಯಾಲಯದಲ್ಲಿ ಓದಿದ ಹಲವು ವಿದ್ಯಾರ್ಥಿಗಳು ಇಂದು ಅನೇಕ ರಾಜ್ಯ ಹಾಗೂ ರಾಷ್ಟ್ರಗಳಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ನಮ್ಮೆಲ್ಲ ಹಳೆ ಸ್ನೇಹಿತರನ್ನು ಒಂದೂಗೂಡಿಸುವುದು ಹಾಗೂ ನಮಗೆ ವಿದ್ಯೆ ಕಲಿಸಿದ ಗುರುಗಳಿಗೆ ಗುರುವಂದನಾ ಕಾರ್ಯಕ್ರಮ ಮಾಡುವ ಮೂಲಕ ಸನ್ಮಾನಿಸುವುದು ಆಗಿದೆ ಎಂದರು.


ಅಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ವಿಶೇಷ ಅತಿಥಿಗಳಾಗಿ ಗಾಜನೂರು ನವೋದಯ ವಿದ್ಯಾಲಯದ ಸಂಸ್ಥಾಪಕ ಪ್ರಾಂಶುಪಾಲರು ಹಾಗೂ ದೆಹಲಿಯ ನವೋದಯ ವಿದ್ಯಾಲಯದ ಸಮಿತಿಯ ನಿವೃತ್ತ ಕಮಿಷನರ್ ಎಚ್.ಎನ್. ಎಸ್.ರಾವ್ ಹಾಗೂ ಹಾಲಿ ಕಮಿಷನರ್ ಗಳಾದ ಎ. ಎನ್.ರಾಮಚಂದ್ರ, ಎಸ್.ವಿ.ಶೇಷಾದ್ರಿ, ಸಾಯಿ ರಂಗರಾವ್, ಎ.ವೈ.ರೆಡ್ಡಿ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನವೋದಯ ಶಾಲೆಯ ಪ್ರಾಂಶುಪಾಲರಾದ ಜಾನ್ಸನ್ ಪಿ. ಜೇಮ್ಸ್ ವಹಿಸುವರು ಎಂದರು.
ಆದಿನ 14 ನೇ ಬ್ಯಾಚ್‌ನ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಡೊಳ್ಳು ಕುಣಿತ, ಹಾಡುಗಾರಿಕೆ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ನಾವು ಈ ಶಾಲೆಗೆ ಆಗ ಡಿಸೆಂಬರ್ ನಲ್ಲಿ ಸೇರಿದ್ದರಿಂದ ಪ್ರತಿವರ್ಷ ಈ ಕಾರ್ಯಕ್ರಮವನ್ನು ಡಿಸೆಂಬರ್ ನಂದೇ ಮಾಡುತ್ತಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿಗಳು, ಪೋಷಕರು, ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ 1000 ಕ್ಕೂ ಜನ ಭಾಗವಹಿಸಲಿದ್ದಾರೆ. ಗಾಜನೂರು ನವೋದಯ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರು ದೇಶದ ವಿವಿಧ ರಾಜ್ಯಗಳಿಂದ ಆಗಮಿಸಲಿದ್ದಾರೆ. ಹಾಗೆಯೇ ಇವರೊಂದಿಗೆ ಗಾಜನೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳನ್ನು ಸನ್ಮಾನಿಸಲಾಗುವುದು ಎಂದರು. ಹಾಗೆಯೇ ಈ ಸಂದರ್ಭದಲ್ಲಿ ಪ್ರತಿ ಬ್ಯಾಚ್‌ನಲ್ಲಿ ಉತ್ತಮ ಸಾದನೆ ಮಾಡಿದ ಒಬ್ಬರಿಗೆ ನವೋದಯ ಭೂಷಣ್ ಪ್ರಶಸ್ತಿಯನ್ನು ನೀಡಲಾಗುವುದು ಎಂದರು.
SUMMARY | As part of the silver jubilee celebrations of the 14th batch of students (1999-2006), the Gajanur Navodaya Vidyalaya Alumni Association will be organising guru vandana and sneha sammelan on December 22 at 10 am at Navodaya Vidyalaya, Gajanur
KEYWORDS | silver jubilee, students, Navodaya Vidyalaya, Gajanur,