SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ
ಮಠವೊಂದರ ಶಿಷ್ಯರು ಎಂದು ಹೇಳಿಕೊಂಡು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿವಾಸಿಯೊಬ್ಬರಿಗೆ ಮೋಸ ಮಾಡಿದ್ದ ಆರೋಪಿಗಳನ್ನ ದಾವಣಗೆರೆ ಜಿಲ್ಲೆ ಹರಿಹರ ಗ್ತಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈ ಸಂಬಂದ ಐವರು ಆರೋಪಿಗಳನ್ನ ಬಂಧಿಸಿರುವ ಪೊಲೀಸರು 2,80,000 ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ ಮೂರು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಏನಿದು ಪ್ರಕರಣ
ಕಳೆದ ವರ್ಷ ಅಕ್ಟೋಬರ್ 21 ರಂದು ತಮ್ಮನ್ನ ಮಠವೊಂದರ ಶಿಷ್ಯರು ಎಂದು ಹೊಸನಗರ ತಾಲ್ಲೂಕು ಗ್ರಾಮವೊಂದರ ವ್ಯಕ್ತಿಯೊಬ್ಬರಿಗೆ ಪರಿಚಯವಾಗಿದ್ದಾರೆ. ಆ ಬಳಿಕ ತಮ್ಮ ಬಳಿ 100 ರೂಪಾಯಿಯ ನೋಟುಗಳು ಬಹಳಷ್ಟಿವೆ. ನೀವು ಐನೂರು ರೂಪಾಯಿಯ ನೋಟುಗಳನ್ನ ನೀಡಿದರೆ ಹೆಚ್ಚಿನ ಹಣವನ್ನು ಕೊಟ್ಟು ಎಕ್ಸ್‌ಚೇಂಜ್ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ. ಇವರ ಮಾತು ನಂಬಿದ ಅವರು ಹಣ ಕೊಟ್ಟಿದ್ದರು. ಅದಕ್ಕೆ ಪ್ರತಿಯಾಗಿ ಬಾಕ್ಸ್‌ವೊಂದನ್ನ ನೀಡಿ ಆರೋಪಿಗಳು ಮೋಸ ಮಾಡಿದ್ದರು.
ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ಸುದ್ದಿಗಳು
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ