ಫೆಬ್ರವರಿ 10 ರಂದು ರಾಜ್ಯಾದ್ಯಂತ ರೈತರ ಹೋರಾಟ | ಕಾರಣವೇನು

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 8, 2025

ಶಿವಮೊಗ್ಗ | ಕೃಷಿ ವಿರೋಧಿ  ಕಾಯ್ದೆಯನ್ನು ವಾಪಸ್ಸು ಪಡೆಯದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಸಂಘ ಹಾಗೂ ಹಸಿರು ಸೇನೆ, ಸಂಯುಕ್ತ ಕರ್ನಾಟಕ ಹೋರಾಟ ವತಿಯಿಂದ ಫೆಬ್ರವರಿ 10 ರಂದು ಬೆಳಿಗ್ಗೆ 11.00 ಗಂಟೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹಾಗೂ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸಂಘದ ಅಧ್ಯಕ್ಷ ಹೆಚ್ ಅರ್ ಬಸವರಾಜಪ್ಪ ತಿಳಿಸಿದರು.

- Advertisement -

ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಪರವಾದ ರೈತರ ವಿರೋಧಿಯಾದ 3 ಕೃಷಿ ಕಾಯ್ದೆಗಳನ್ನ ತಂದಿತ್ತು. ಈ ಕಾಯ್ದೆಗಳು, ಎಂ.ಎಸ್.ಪಿ ಯನ್ನು ಕಾನೂನಾತ್ಮಕವಾಗಿ ಜಾರಿ ಮಾಡುವುದು, ವಿದ್ಯುತ್ ಖಾಸಗೀಕರಣ ಮಾಡಬಾರದೆಂದು ಇನ್ನೂ ಹಲವಾರು ಸಮಸ್ಯೆಗಳನ್ನು ಪರಿಹರಿಸುವಂತೆ ಎಲ್ಲಾ ರೈತರು ದೆಹಲಿಯಲ್ಲಿ ಹೋರಾಟ ನಡೆಸಿದರು. ಈ ಹೋರಾಟದಲ್ಲಿ 700ಕ್ಕೂ ಹೆಚ್ಚು ಜನ ರೈತರು ಪ್ರಾಣ ತ್ಯಾಗ ಮಾಡಿದರು. ವಿರೋಧ ಪಕ್ಷದಲ್ಲಿದ್ದ ನಿಮ್ಮ ಕಾಂಗ್ರೇಸ್ ಪಕ್ಷವೂ ಸಹ ಚಳುವಳಿಯಲ್ಲಿ ಭಾಗವಹಿಸಿತ್ತು. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದು ರೈತ ವಿರೋಧಿ 3ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆದು ಎಂ.ಎಸ್.ಪಿ ಯನ್ನು ಕಾನೂನಾತ್ಮಕವಾಗಿ ಜಾರಿಗೊಳಿಸುವುದಾಗಿ, ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ಲಿಖಿತ ಭರವಸೆ ಕೊಟ್ಟ ಪರಿಣಾಮ ಚಳುವಳಿಯನ್ನ ಹಿಂದೆ ತೆಗೆದುಕೊಳ್ಳಲಾಯಿತು.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 3ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯುವುದಾಗಿ, ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು, ಪ್ರಕಟಣೆ ಮಾಡಿದ್ದರು. ಹಾಗೆಯೇ ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಕರೆದು ಎಲ್ಲಾ ಪಕ್ಷದವರಿಗೆ ಆಹ್ವಾನ ನೀಡಿತ್ತು. ಈ ಸಭೆಗೆ ತಮ್ಮ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿ ನಮ್ಮ ಪ್ರಣಾಳಿಕೆಯನ್ನು ಸಂಪೂರ್ಣ ಒಪ್ಪಿ ಲಿಖಿತ ಭರವಸೆ ಕೊಟ್ಟಿದ್ದರು. ಆದರೆ ಡಿಕೆಶಿವಕುಮಾರ್‌ ಹಾಗೂ ಸಿದ್ದರಾಮಯ್ಯರವರು ನುಡಿದಂತೆ ನಡೆದಿದ್ದೇವೆ ಎಂದು ಬಾಯಲ್ಲಿ ಮಾತ್ರ ಹೇಳುತ್ತಾರೆ. ಆದರೆ ಅವರು ಇದುವರೆಗೂ ಈ ಕೃಷಿ ಕಾಯ್ದೆಯನ್ನು ವಾಪಾಸ್‌ ತೆಗೆದುಕೊಳ್ಳುವ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಆರೋಪಿಸಿದರು.

ಈಗಾಗಲೇ ನಾವು ಮುಖ್ಯಮಂತ್ರಿಗಳಿಗೆ ತುರ್ತು ಬಹಿರಂಗ ಪತ್ರವನ್ನು ಸಹ ಕೊಟ್ಟಿದ್ದೇವೆ. ಆದರೆ ಇಲ್ಲಿಯವರೆಗೂ ಅವರಿಂದ ಯಾವುದೇ ಪ್ರತಿಕ್ರಿಯೆಬಾರದೇ ಇರುವುದರಿಂದ ತಮ್ಮ ಸರ್ಕಾರದ ವಿರುದ್ಧ ಚಳುವಳಿಯನ್ನು ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನೆಗೆ ರೈತರು, ಕೃಷಿ ಕೂಲಿಕಾರ್ಮಿಕರು, ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಈ ಮೂಲಕ ಕೋರುತ್ತೇವೆ ಎಂದರು.

SUMMARY | On February 10, at 11.00 am, a massive protest will be held at all district and taluk headquarters across the state and in the premises of the deputy commissioner’s office in the city. Association President H.R. Basavarajappa said.

KEYWORDS |  protest,  deputy commissioner’s office,  Basavarajappa,  formers,

Share This Article
Leave a Comment

Leave a Reply

Your email address will not be published. Required fields are marked *