SHIVAMOGGA| MALENADUTODAY NEWS | ಮಲೆನಾಡು ಟುಡೆ Mar 25, 2025

ಶಿವಮೊಗ್ಗದ ಬಸ್ಸ್ಟ್ಯಾಂಡ್ ಬಳಿ ಇರುವ ಬಿರಿಯಾನಿ ಹೋಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಸಾಮಗ್ರಿಗಳು ಸುಟ್ಟುಕರಕಲಾಗಿವೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ಬಿರಿಯಾನಿ ಹೌಸ್ ಹೋಟೆಲ್ನಲ್ಲಿ ಈ ಘಟನೆ ಸಂಭವಿಸಿದೆ.

ಇನ್ನೂ ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಅರ್ಧಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಅಡುಗೆ ಕೋಣೆಯಲ್ಲಿ ಇದ್ದ ವಸ್ತುಗಳು ಸುಟ್ಟು ಹೋಗಿವೆ.