ಮನೆಯಿಂದ ಬರುತಿತ್ತು ದುರ್ನಾತ, ವಿಷಯ ಮುಟ್ಟಿಸಿದ ಸ್ಥಳೀಯರು! ಸ್ಥಳಕ್ಕೆ ಬಂದ ಪೊಲೀಸರಿಗೆ ಸಿಕ್ಕಿದ್ದು ಮಹಿಳೆಯ ಶವ

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 4, 2025 ‌‌ 

ಸುಮಾರು ನಾಲ್ಕು ದಿನಗಳ ಹಿಂದೆಯೇ ಒಂಟಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಶವ ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿಯೇ ಪತ್ತೆಯಾಗಿದೆ. ಪ್ರಕರಣ ಸಂಶಯಕ್ಕೆ ಕಾರಣವಾಗಿದೆ. 

ಶಿವಮೊಗ್ಗ ಜಿಲ್ಲೆ  ಸೊರಬ ತಾಲ್ಲೂಕು,  ಪಟ್ಟಣದ ಸಾಗರ ರೋಡ್‌ನಲ್ಲಿ ನಿನ್ನೆ ದಿನ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೃತರನ್ನು  67 ವರುಷದ ಶಾಂತಮ್ಮ ಬಸವರಾಜ್ ಎಂದು ಗುರುತಿಸಲಾಗಿದೆ. 

ಶಾಂತಮ್ಮ ಸಾಗರ ರಸ್ತೆಯಲ್ಲಿರುವ ಮನೆಯಲ್ಲಿ ಒಂಟಿಯಾಗಿ ವಾಸವಿದ್ದರು, ಮೇಲಾಗಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ನಾಲ್ಕೈದು ದಿನಗಳ ಹಿಂದೆಯೇ ಅವರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸುತ್ತಮುತ್ತ ತೀವ್ರ ದುರ್ನಾತ ಬೀರಿದ್ದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಸ್ಥಳಕ್ಕೆ ಬಂದ ಪೊಲೀಸರು ಸಂಶಯದ ಮೇರೆಗೆ ಮನೆಯ ಕದ ತಟ್ಟಿದ್ದರು. ಆದರೆ ಯಾರು ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆ ಮೂಲಕ ಬಾಗಿಲು ತೆಗೆದು ನೋಡಿದಾಗ ಮಹಿಳೆ ಮೃತಪಟ್ಟಿರುವುದು ಗೊತ್ತಾಗಿದೆ. ಸದ್ಯ ಘಟನೆ ಸಂಬಂದ ಪ್ರಕರಣ ದಾಖಲಿಸಿರುವ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು