SHIVAMOGGA | MALENADUTODAY NEWS | ಮಲೆನಾಡು ಟುಡೆ Dec 14, 2024
ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಕೃಷಿಕರಿಗೆ ತಲೆಬಿಸಿ ತಂದಿರುವ ಅಡಿಕೆ ಎಲೆಚುಕ್ಕೆ ರೋಗಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ₹225.73 ಕೋಟಿ ರೂಪಾಯಿಯ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸದನ ಕಲಾಪದಲ್ಲಿ ಮಾಹಿತಿ ನೀಡಿದ್ದಾರೆ.
ಅಡಿಕೆಗೆ ಬಾಧಿಸುತ್ತಿರುವ ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗಗಳ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ವೈಜ್ಞಾನಿಕ ತಂಡದ ಸಮಿತಿಯ ಶಿಫಾರಸಿನ ಅನ್ವಯ 54,000 ಹೆಕ್ಟೇರ್ ಪ್ರದೇಶಕ್ಕೆ ₹225.73 ಕೋಟಿ ಪ್ರಸ್ತಾವನೆ ನೀಡಲಾಗಿದೆ. ಎಲೆ ಚುಕ್ಕೆ ರೋಗಕ್ಕೆ ಸಂಬಂಧಿಸಿದಂತೆ ಫೈಟೋಸ್ಯಾನಿಟರಿ ಕ್ರಮಗಳ ಅಳವಡಿಕೆ, ಪೋಷಕಾಂಶಗಳ ನಿರ್ವಹಣೆ, ಸಸ್ಯ ಸಂರಕ್ಷಣೆ ಕ್ರಮಗಳ ಅಳವಡಿಕೆ ಹಾಗೂ ತಾಂತ್ರಿಕ ಮಾಹಿತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲವಾಗಿ ಈ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
SUMMARY |Horticulture Minister S.S. Mallikarjun informed the House that a proposal of Rs 225.73 crore has been submitted to the Central Government regarding the areca leaf spot disease that has been a headache for farmers in Chikkamagaluru, Shivamogga and Dakshina Kannada districts.

KEY WORDS |Horticulture Minister S.S. Mallikarjun, Central Government , areca leaf spot disease ,Chikkamagaluru, Shivamogga, Dakshina Kannada districts,