SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 22, 2024 shimoga news
ಶಿವಮೊಗ್ಗ ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿಸುತ್ತಿರುವ 2,400 ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅಷ್ಟೆ ಅಲ್ಲದೆ ಸರ್ಕಾರಿ ನೌಕರರೂ ಸಹ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎಂಬ ಮಾಹಿಡಿ ಕೆಡಿಪಿ ಸಭೆಯಲ್ಲಿ ಬಹಿರಂಗವಾಗಿದೆ.
ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಸಭೆಯಲ್ಲಿ ಮಾತನಾಡಿದ ಆಹಾರ ಇಲಾಖೆ ಉಪನಿರ್ದೇಶಕ ಅವಿನ್ ಮಾತನಾಡಿ, 3.80 ಲಕ್ಷ ಬಿಪಿಲ್ ಕಾರ್ಡುದಾರರು ಇದ್ದು, ಈ ಪೈಕಿ 6 ತಿಂಗಳು ಸತತವಾಗಿ ಪಡಿತರ ಪಡೆಯದ 8000 ಕಾರ್ಡುಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇ-ಜನ್ಮ್ ಪೋರ್ಟಲ್ ಮಾಹಿತಿ ಮೇರೆಗೆ ಮರಣ ಹೊಂದಿದ 5000 ಕಾರ್ಡುದಾರರ ಹೆಸರನ್ನು ತೆಗೆದುಹಾಕಲಾಗಿದೆ. ಇನ್ನೂ ರದ್ದುಪಡಿಸುವ 1500 ಜನರ ಪಟ್ಟಿ ಇದೆ. 58 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದುಪಡಿಸಿ ದಂಡ ವಿಧಿಸಲಾಗಿದೆ.
2395 ಐಟಿ ಪಾವತಿದಾರರ ಬಿಪಿಎಲ್ ನ್ನು ಎಪಿಎಲ್‌ಗೆ ಪರಿವರ್ತನೆ ಮಾಡಲಾಗಿದೆ. ಕುಟುಂಬದ ವಾರ್ಷಿಕ ವರಮಾನ 1.20 ಲಕ್ಷ ಇರುವ 53,342 ಕಾರ್ಡುಗಳು ಇವೆ. ಇವನ್ನು ರದ್ದುಗೊಳಿಸಲು ಕ್ರಮ ವಹಿಸಬೇಕದೆ.
ಹೊಸದಾಗಿ ಪಡಿತರ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದ 4963 ರಲ್ಲಿ 2489 ನೀಡಲಾಗಿದೆ. 980 ತಿರಕಸ್ಕರಿಸಲಾಗಿದ್ದು ಉಳಿದವನ್ನು ಮುಂದೆ ಪೋರ್ಟಲ್ ಓಪನ್ ಆದಾಗ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.