ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್‌ ಉದ್ಯೋಗ ಮೇಳ | ಕೆಲಸ ಕೊಡಲಿವೆ 50 ಕ್ಕೂ ಹೆಚ್ಚು ಕಂಪನಿ | ವಿವರ ಕ್ಲಿಕ್‌ ಮಾಡಿ ಓದಿ

13

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 18, 2025 ‌‌ 

ಶಿವಮೊಗ್ಗದ ATNCC ಕಾಲೇಜಿನಲ್ಲಿ ಇದೇ ಫೆಬ್ರವರಿ 24 ರಂದು ಉದ್ಯೋಗ ಮೇಳ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸರ್ವರಿಗೂ ಉದ್ಯೋಗ ಎಂಬ ಟ್ಯಾಗ್‌ಲೈನ್‌ ಅಡಿಯಲ್ಲಿ ಈ ಉದ್ಯೋಗ ಮೇಳ ನಡೆಸಲಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದ್ದಾರೆ

- Advertisement -

ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಫೆಬ್ರವರಿ 24ರ ಬೆಳಿಗ್ಗೆ 9.30ಕ್ಕೆ ನಗರದ ಎಟಿಎನ್‌ಸಿ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಈ ಉದ್ಯೋಗ ಮೇಳವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಈ ಮೇಳದಲ್ಲಿ ಸುಮಾರು 50 ಕ್ಕೂ ಹೆಚ್ಚು ಪ್ರತಿಷ್ಟಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಈ ಸಂಬಂಧ ಈಗಾಗಲೇ 65 ಕಂಪನಿಗಳ ಜೊತೆ ಮಾತುಕತೆ ನಡೆದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. 

18 ರಿಂದ 35 ವರ್ಷದೊಳಗಿನ ಯುವಕ ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಇದಕ್ಕಾಗಿ  ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕಿದೆ. ಆನ್‌ಲೈನ್‌ ಹಾಗೂ ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ : 08182-255294, 9019485688 ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ. 

SUMMARY | job fair in shivamogga, job in shivamogga 

KEY WORDS |    job fair in shivamogga, job in shivamogga 

Share This Article
Leave a Comment

Leave a Reply

Your email address will not be published. Required fields are marked *