SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 31, 2024
ಶಿವಮೊಗ್ಗ | ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಒಟ್ಟು ರೂ. 15000 ನಿಶ್ಚಿತ ಮಾಸಿಕ ಗೌರವಧನ ನಿಗದಿಯಾಗಬೇಂಬ ಬೇಡಿಕೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿ ಇವತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ. ಅಲ್ಲದೆ ಈ ಸಂಬಂಧ ಮುಂಬರುವ ಜನವರಿ ಏಳರಂದು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಿರುವ ಹೋರಾಟದ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಸರ್ಕಾರದ ಗಮನ ಸೆಳೆದಿದ್ದಾರೆ.
ಇಂದು ನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಾತನಾಡಿದ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿ ಮುಖ್ಯಸ್ಥ ರಾದ ರಾಜೇಶ್ವರಿ ಮಾತನಾಡಿ ಆಶಾ ಕಾರ್ಯಕರ್ತೆಯರಾದ ನಾವು ಹಗಲಿರುಳು ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡಲು ಆರೋಗ್ಯ ಇಲಾಖೆಯಲ್ಲಿ ಪರಿಶ್ರಮಿಸುತ್ತಿರುವುದು ಸರ್ಕಾರಕ್ಕೆ ತಿಳಿದಿದೆ. ನಮ್ಮಂತೆಯೇ ರಾಜ್ಯದಲ್ಲಿ ಸರಿ ಸುಮಾರು 42,000 ಆತಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಕುರಿತು ಸಮಾಜದ ಆರೋಗ್ಯಕರ ಬದಲಾವಣೆಗೆ ಮಹತ್ವದ ವಾತ್ರವನ್ನು ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಡಿದು ಎಲ್ಲರೂ ಶ್ಲಾಘಿಸಿದ್ದಾರೆ.

ಈ ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ‘ಆಶಾ’ ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು “ಆಶಾನಿಧಿ ಪೋರ್ಟಲ್ ನಲ್ಲಿ ಆನ್ಲೈನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ. ಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯ ಆಗುತ್ತಿದೆ” ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8-9 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಲೆಕ್ಕವಿಲ್ಲದಷ್ಟು ಸಭೆಗಳು, ಚರ್ಚೆಗಳು, ನಡೆದಿವೆ.
ಕೇಂದ್ರ ಸರ್ಕಾರದಿಂದ ಇರುವ ಸುಮಾರು ರೂ.2000 ಪ್ರೋತ್ಸಾಹಧನ (ಆಶಾ ಸಾಫ್ಟ್ ಆನ್‌ಲೈನ್ ಸಮಸ್ಯೆಯಿಂದ ಕೇಂದ್ರದ ಈ ಪ್ರೋತ್ಸಾಹಧನ ಸಂಪೂರ್ಣ ಬರುತ್ತಿಲ್ಲ) ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠೆಯ ಐದು ಗ್ಯಾರಂಟಿಗಳ ಜೊತೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪುಣಾಳಿಕೆಯಲ್ಲಿ ಭರವಸೆಯ ನೀಡಿರುವ ರೂ. 3000 ಗಳನ್ನು ಒಟ್ಟುಗೂಡಿಸಿ ಮಾಸಿಕ ರೂ. 15,000 ಗೌರವಧನ ನಿಗದಿ ಮಾಡಬೇಕು ಮತ್ತು ಇತರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, 13-14 ಫೆಬ್ರವರಿ 2024 ರಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅನಿರ್ದಿಷ್ಟ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳು ಇದುವರೆಗೂ ಈಡೇರಿಸಿಲ್ಲ. ಈ ನಡುವೆ ಕಳೆದ 11 ತಿಂಗಳುಗಳ ಅವಧಿಯಲ್ಲಿ ಸರ್ಕಾರ ಮತ್ತು ಇಲಾಖೆಯ ಜೊತೆಯಲ್ಲಿ 15 ಕ್ಕೂ ಹೆಚ್ಚು ರಾಜ್ಯ ಮಟ್ಟದ ಸಭೆಗಳು ನಡೆದಿವೆ. ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತೆಯರು ಲೆಕ್ಕವಿಲ್ಲದಷ್ಟು ಸಂದರ್ಭಗಳಲ್ಲಿ ಸರ್ಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಚಿವರು, ಶಾಸಕರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆ ಪರಿಹರಿಸಿ ಎಂದು ಕೋರಿಕೊಂಡಿದ್ದಾರೆ. ಯಾವುದಕ್ಕೂ ಮನ್ನಣೆ ಸಿಗದ ಹಿನ್ನೆಲೆಯಲ್ಲಿ ಇದೇ ಜನವರಿ 7 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಹೋರಾಟ ನಡೆಯಲಿದೆ ಎಂದು ತಿಳಿಸಿದ್ದಾರೆ.
SUMMARY | The Karnataka State Samyukta ASHA Workers Association district committee has urged the state government through the deputy commissioner.
KEYWORDS | ASHA Workers, deputy commissioner, protest, shivamogga,