SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 21, 2024 shimoga power cut
ಈಗಾಗಲೇ ಹಿಂದೂ ಮಹಾಸಭಾ ಗಣಪತಿ ಸೇರಿದಂತೆ ಜಿಲ್ಲೆ ವಿವಿಧ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆ ಬಂದೋಬಸ್ತ್‌ನ್ನ ಯಶಸ್ವಿಯಾಗಿ ಮುಗಿಸಿರುವ ಶಿವಮೊಗ್ಗ ಪೊಲೀಸ್ ಇಲಾಖೆ ನಾಳಿನ ಶಿವಮೊಗ್ಗ ನಗರದ ಈದ್ ಮಿಲಾದ್ ಮೆರವಣಿಗೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಈ ಸಂಬಂಧ ನಾಳೆ ಅಂದರೆ 22-09-2024 ರಂದು ಶಿವಮೊಗ್ಗ ನಗರದಲ್ಲಿ ನಡೆಯುವ ಈದ್ ಮಿಲಾದ್ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 03 ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನ ಬರಮಾಡಿಕೊಳ್ಳಲಾಗಿದೆ.
ಪೊಲೀಸ್ ಬಂದೋಬಸ್ತ್
ಒಟ್ಟು 25 ಪೊಲೀಸ್ ಉಪಾಧೀಕ್ಷಕರು, 60 ಪೋಲಿಸ್ ನಿರೀಕ್ಷಕರು, 110 ಪೊಲೀಸ್ ಉಪನಿರೀಕ್ಷಕರು, 200 ಸಹಾಯಕ ಪೊಲೀಸ್ ನಿರೀಕ್ಷಕರು, 3500 ಪೊಲೀಸ್ ಹೆಡ್ ಕಾನ್ಸ್ ಟೆಬಲ್, ಪೊಲೀಸ್ ಕಾನ್ಸ್ ಟೆಬಲ್ ಮತ್ತು ಗೃಹರಕ್ಷಕ ದಳ ಸಿಬ್ಬಂದಿಗಳು, 01-RAF ತುಕಡಿ 08 ಡಿಎಆರ್ ತುಕಡಿ, 01 QRT ತುಕಡಿ, 01 DSWAT ತುಕಡಿ, 10 ಕೆಎಸ್ಆರ್.ಪಿ ತುಕಡಿಗಳು, 05 ದ್ರೋಣ್ ಕ್ಯಾಮರಾಗಳು, 100 ವಿಡಿಯೋಗ್ರಾಫರ್ ಗಳನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್
ಇನ್ನೂ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ, ಈ ದಿನ ಮಧ್ಯಾಹ್ನ ಶಿವಮೊಗ್ಗ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಎಸ್‌ಪಿ ಮಿಥುನ್ ಕುಮಾರ್ ಬ್ರೀಫಿಂಗ್ ಮಾಡಿದರು. ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ