SHIVAMOGGA | MALENADUTODAY NEWS | ಮಲೆನಾಡು ಟುಡೆ Dec 14, 2024
ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ವಿಚಾರದಲ್ಲಿ ಗಾಜನೂರು ಡ್ಯಾಂ ಬಳಿಯಲ್ಲಿ ನೀರು ಶುದ್ದೀಕರಣ ಘಟಕ ಸ್ಥಾಪಿಸುವ ವಿಚಾರ ವಿಧಾನಸಭಾ ಕಲಾಪದಲ್ಲಿ ಚರ್ಚೆಯಾಗಿದೆ. ಈ ಸಂಬಂಧ ಕಲಾಪದಲ್ಲಿ ಮಾತನಾಡಿದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ (Minister for Urban Development and Town Planning Bairati Suresh) ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಸಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ
ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ನೀರು ಶುದ್ಧೀಕರಣ ಘಟಕ ನಿರ್ಮಿಸಲು ಉದ್ದೇಶಿಸಿರುವ ಸ್ಥಳ ಅರಣ್ಯ ಪ್ರದೇಶದಲ್ಲಿ ಇದೆ. ಶೀಘ್ರವೇ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (ಎನ್.ಒ.ಸಿ) ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದಿದ್ದಾರೆ. ಅಲ್ಲದೆ ಹಾಗೊಂದು ವೇಳೆ ಎನ್.ಒ.ಸಿ ಲಭಿಸದಿದ್ದರೆ, ಬದಲಿ ಜಾಗ ಗುರುತಿಸಲು ಶಿವಮೊಗ್ಗ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ನಗರಕ್ಕೆ ಈಗ ನೀರು ಪೂರೈಕೆ ಮಾಡುತ್ತಿರುವ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರದಲ್ಲಿ 1976ರಲ್ಲಿ 13.62 ಎಂ.ಎಲ್.ಡಿ, 1996ರಲ್ಲಿ 13.38 ಎಂ.ಎಲ್.ಡಿ ಹಾಗೂ 2009ರಲ್ಲಿ 57 ಎಂ.ಎಲ್.ಡಿ ಸೇರಿ ಒಟ್ಟು 84 ಎಂ.ಎಲ್.ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಈಗ ಆ ಎರಡೂ ಶುದ್ಧೀಕರಣ ಘಟಕಗಳು ಶಿಥಿಲಾವಸ್ಥೆಯಲ್ಲಿವೆ. ಇವುಗಳ ಬದಲು ಹೊಸದಾಗಿ ಶುದ್ಧೀಕರಣ ಘಟಕ ನಿರ್ಮಿಸಲು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಗಾಜನೂರು ಅರಣ್ಯ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗಿದೆ. ಈ ಸ್ಥಳದಿಂದ ಗುರುತ್ವಾಕರ್ಷಣೆ ಮೂಲಕ ಶಿವಮೊಗ್ಗಕ್ಕೆ ನೀರು ಸರಬರಾಜು ಮಾಡಬಹುದು. ಈ ಸಂಬಂಧ ಸರ್ವೆ ಕಾರ್ಯ ಹಾಗೂ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

SUMMARY | Minister for Urban Development and Town Planning Bairati Suresh has informed that a plan has been formulated to build a new water purification plant near Gajanur to supply drinking water to Shivamogga city.
KEY WORDS | Minister for Urban Development and Town Planning Bairati Suresh , new water purification plant near Gajanur , drinking water supply to Shivamogga city.