SHIVAMOGGA | MALENADUTODAY NEWS | ಮಲೆನಾಡು ಟುಡೆ Jan 31, 2025

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರವಾಗಿ ಹೊಸದೊಂದು ಸುದ್ದಿ ಹೊರಬಿದ್ದಿದೆ. ಇದನ್ನು ಸ್ವತಃ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ನಿನ್ನೆದಿನ ಶಿವಮೊಗ್ಗಕ್ಕೆ ಬಂದಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆ ಕುರಿತು ಪ್ರಮುಖ ನಿರ್ಧಾರವನ್ನು ಸದ್ಯದಲ್ಲಿಯೇ ಕೈಗೊಳ್ಳಲಾಗುತ್ತಿದೆ ಎಂದರು.
ವಿಮಾನಯಾನ ಪ್ರಾಧಿಕಾರವೂ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ತಮ್ಮ ಸುಪರ್ಧಿಗೆ ನೀಡುವಂತೆ ಕೇಳುತ್ತಿದೆ. ಈ ನಿಟ್ಟಿನಲ್ಲಿ ಕಲಬುರಗಿಯಲ್ಲಿ 1500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ವಿಮಾನ ನಿಲ್ದಾಣವನ್ನು ವಿಮಾನಯಾನ ಪ್ರಾಧಿಕಾರಕ್ಕೆವಹಿಸಲಾಗಿದೆ, ಇದರಿಂದಾಗಿ ವಿಮಾನದ ನಿಲ್ದಾಣದ ಭೂಮಿಯು ಸಹ ವಿಮಾನಯಾನ ಪ್ರಾಧಿಕಾರಕ್ಕೆ ಸೇರಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ವಿಮಾನಯಾನ ಪ್ರಾಧಿಕಾರಕ್ಕೆ ವಹಿಸುವ ವಿಚಾರ ಮಾಡಲಾಗುತ್ತಿದೆ. ನಿಲ್ದಾಣದ ಭೂಮಿಯನ್ನು ವಿಮಾನಯಾನ ಪ್ರಾಧಿಕಾರಕ್ಕೆ ಲೀಸ್ ರೂಪದಲ್ಲಿ ನೀಡುವ ಬಗ್ಗೆ ಚರ್ಚಿಸಲಾಗಿದೆ, ಹಾಗೆ ಮಾಡಿದ ಪಕ್ಷದಲ್ಲಿ ಭೂಮಿಯು ರಾಜ್ಯ ಸರ್ಕಾರದ ಸುಪರ್ಧಿಯಲ್ಲಿಯೇ ಇರುತ್ತದೆ. ಹೀಗಾಗಿ ಇದರ ಸಾಧಕ ಬಾಧಕ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂದು ತಿಳಿಸಿದರು.

SUMMARY | Minister for Heavy Industries M.B. Patil gave a new update on the issue of Shivamogga Airport.
KEY WORDS | Minister for Heavy Industries M.B. Patil , new update on the issue of Shivamogga Airport