SHIVAMOGGA | MALENADUTODAY NEWS | ಮಲೆನಾಡು ಟುಡೆ Nov 23, 2024
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಪೊಲೀಸರು ಭರ್ಜರಿ ಬೇಟೆಯೊಂದನ್ನ ನಡೆಸಿದ್ದಾರೆ. ಮನೆಯೊಂದಕ್ಕೆ ನುಗ್ಗಿ ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಪ್ರಕರಣವನ್ನ ಭೇದಿಸಿದ್ದಾರೆ.
ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮದ ಸಮೀಪ ಈ ಘಟನೆ ನಡೆದಿತ್ತು. ಇಲ್ಲಿನ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿ ಅಲ್ಲಿದ್ದ ಮಹಿಳೆಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು ಸಮೀಪದ ಬಿಡದಿ ಮೂಲದ ವ್ಯಕ್ತಿಯನ್ನ ಅರೆಸ್ಟ್ ಮಾಡಿರುವ ಪೊಲೀಸರು ಈತನಿಂದ ₹ 2.78 ಲಕ್ಷ ಮೌಲ್ಯದ 39.94 ಗ್ರಾಂ ಚಿನ್ನದ ಸರವನ್ನು ವಶಕ್ಕೆ ಪಡೆದಿದ್ದಾರೆ.

SUMMARY| Sagar rural police have arrested a man for allegedly snatching a gold chain from a woman at knifepoint from a house near Kalmane in Sagar taluk of Shivamogga district
KEY WORDS | Sagar rural police , allegedly snatching a gold chain from a woman , Kalmane in Sagar taluk of Shivamogga district