ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ | ಯಾವಾಗ ಲಾಸ್ಟ್‌ ಡೇಟ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 14, 2025

2025-26 ನೇ ಸಾಲಿನ ಅಗ್ನಿವೀರ್‌ ನೇಮಕಾತಿಗೆ  ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ. 

ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆನ್ಲೈನ್‌ ನೊಂದಣಿಯು ಮಾರ್ಚ್‌ 12 ರಿಂದ ಆರಂಭವಾಗಿ ಏಪ್ರಿಲ್‌ 10 ರವರೆಗೆ ಇರಲಿದೆ.

ಇಲ್ಲಿರುವ ನೊಂದಣಿ ಪೋರ್ಟಲ್‌ನ್ನುWWW.JOININDINARMY.NIC.IN ಬಳಸಿಕೊಂಡು  ಅರ್ಜಿ ಸಲ್ಲಿಸಬಹುದು. ಹಾಗೆಯೇ ಆನ್ಲೈನ್‌ ಪರೀಕ್ಷೆಯು  ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.

ಭಾರತೀಯ ಸೇನೆಯಲ್ಲಿ ಆಯ್ಕೆ ‘ನ್ಯಾಯಯುತ ಮತ್ತು ಪಾರದರ್ಶಕ’ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: [email protected]ಸಂಪರ್ಕಿಸಬಹುದಾಗಿದೆ.

SUMMARY | Online applications are invited from unmarried male candidates for the recruitment of Agniveer for the year 2025-26.

KEYWORDS | Online applications,  Agniveer, recruitment,

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು