SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 8, 2025
ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್‌ರವರ ಕಿರಿಯ ಪುತ್ರ ಮಾರ್ಕ್ ಶಂಕರ್ ಸಿಂಗಾಪುರ್‌ನ ತಮ್ಮ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಗಡದಿಂದ ತೀವ್ರ ಗಾಯಗೊಂಡಿದ್ದಾರೆ.
ಈ ಘಟನೆಯಲ್ಲಿ ಮಾರ್ಕ್ ಶಂಕರ್‌ಗೆ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು, ಬೆಂಕಿಯಿಂದ ಉಂಟಾದ ಹೊಗೆಯಿಂದ ಉಸಿರಾಟದ ತೊಂದರೆ ಉಂಟಾಗಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ಸಮಯದಲ್ಲಿ ಪವನ್ ಕಲ್ಯಾಣ್ ಅಲ್ಲೂರಿ ಸೀತಾರಾಮ ಜಿಲ್ಲೆಯಲ್ಲಿ ಪ್ರವಾಸದಲ್ಲಿದ್ದರು. ವಿಷಯ ತಿಳಿದು ಪ್ರವಾಸವನ್ನು ತಕ್ಷಣವೇ ಸ್ಥಗಿತ ಗೊಳಸಿ ಸಿಂಗಾಪುರಕ್ಕೆ ಪ್ರಯಾಣಿಸಿದ್ದಾರೆ ಎನ್ನಲಾಗಿದೆ.
ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ ಎಂಬ ಇಬ್ಬರು ಮಕ್ಕಳಿದ್ದು, ಅವರು ಸಿಂಗಪುರದಲ್ಲಿ ನೆಲೆಸಿದ್ದಾರೆ.
SUMMARY | Andhra Pradesh Deputy Chief Minister and actor Pawan Kalyan’s younger son Mark Shankar was seriously injured in a fire that broke out at his school in Singapore.
KEYWORDS | Andhra Pradesh, Pawan Kalyan, Mark Shankar,