SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 12, 2024 | SHIVAMOGGA RAIN | ನವರಾತ್ರಿಯ ಸಂಭ್ರಮದ ನಡುವೆ ಮಳೆಯ ಅಬ್ಬರ ಮಲೆನಾಡಿನಲ್ಲಿ ಆತಂಕ ಹುಟ್ಟಿಸುತ್ತಿದೆ. ಮೇಘಸ್ಫೋಟವಾದಂತೆ ಸುರಿಯುವ ಸಂಜೆ ಮಳೆಯು, ಎಲ್ಲಿ ಪ್ರವಾಹ ಸೃಷ್ಟಿಸುತ್ತಿದೆಯೋ ಎಂಬ ಭಯವನ್ನ ಹುಟ್ಟಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಿನ್ನೆ ಶಿವಮೊಗ್ಗ ಜಿಲ್ಲೆ ಯಲ್ಲಿ ಕತ್ತಲಾಗುತ್ತಿದ್ದಂತೆ ಹಲವೆಡೆ ಭಾರೀ ಮಳೆಯಾಗಿದೆ.
ಮಳೆಯ ಆರ್ಭಟಕ್ಕೆ ಭದ್ರಾವತಿ ಸಿಟಿಯಲ್ಲಿಯೇ ಹಲವು ಅಂಗಡಿಗಳಿಗೆ , ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ವರದಿಯಾಗಿದೆ. ಇನ್ನೂ ಉಳಿದೆಡೆಯ ಮಾಹಿತಿಗಳು ಇನ್ನಷ್ಟೆ ಲಭ್ಯವಾಗಬೇಕಿದೆ.
ಈ ನಡುವೆ ಹವಾಮಾನ ಇಲಾಖೆ ಇವತ್ತು ಕೂಡ ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನಾಳೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
SUMMARY | Indian met department has predicted rain in many places including Shivamogga today. thundershowers in chikkamagaluru, Shivamogga, Mysuru and Hassan districts, including coastal Karnataka.
KEYWORDS | Indian met department , predicted rain in many places, Shivamogga today, thundershowers in chikkamagaluru, Shivamogga, Mysuru and Hassan districts, including coastal Karnataka.
