SHIVAMOGGA | MALENADUTODAY NEWS | ಮಲೆನಾಡು ಟುಡೆ Jan 2, 2025
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲೊಂದು ಧಾರುಣ ಘಟನೆ ನಡೆದಿದೆ. ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಏನಿದು ಘಟನೆ
ಹೊಸನಗರ ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಕಾಲೊನಿಯಲ್ಲಿ ಇಂತಹದ್ದೊಂದು ದಾರುಣ ಘಟನೆ ಸಂಭವಿಸಿದೆ. ಇಲ್ಲಿನ ನಿವಾಸಿ ಮಂಜುನಾಥ ಎಂಬವರು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ವಿಷಯ ತಿಳಿದು, ಅವರ ಪತ್ನಿ ಅಮೃತಾ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ಡಿಸೆಂಬರ್ 31ರಂದು ಬೈಕ್‌ನಲ್ಲಿ ಶಿಕಾರಿಪುರಕ್ಕೆ ತೆರಳಿದ್ದ ಮಂಜುನಾಥ (25) ರವರು ಬೈಕ್ ಆಕ್ಸಿಡೆಂಟ್ ಆಗಿ ಗಾಯಗೊಂಡಿದ್ದರು. ಅವರು ನಿನ್ನೆ ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಪತ್ನಿ ಅಮೃತಾ, ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೈಸೂರು ಮೂಲದ ಅಮೃತಾ ಅವರನ್ನು ಮಂಜುನಾಥ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ಇಬ್ಬರನ್ನು ಕಳೆದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.
SUMMARY | wife committed suicide after hearing about her husband’s death in Sutta Colony under the jurisdiction of Melinabesige Gram Panchayat in Hosanagar taluk.
KEY WORDS | wife committed suicide after hearing about her husbands death, Sutta Colony, Melinabesige Gram Panchayat, Hosanagar taluk