SHIVAMOGGA | MALENADUTODAY NEWS | Aug 18, 2024 ಮಲೆನಾಡು ಟುಡೆ
ಅಗ್ನಿವೀರ್ ಸೇನಾ ನೇಮಕಾತಿ ಪ್ರಕ್ರಿಯೆ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 21 ರಿಂದ ಆಗಸ್ಟ್ 31ರವರೆಗೆ ನೆಹರೂ ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಸಂಬಂಧ ಹೊರಡಿಸಲಾಗಿರುವ ಪ್ರಕಟಣೆಯ ವಿವರ ಹೀಗಿದೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ‍್ಯಾಲಿ ನಡೆಯುವ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಹಾಗೂ ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ