SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 22, 2025
ಶಿವಮೊಗ್ಗ | ಬರಿ ಆಶ್ರಯ ಮನೆಗಳನ್ನು ಕೊಡುವುದಷ್ಟೇ ಅಲ್ಲ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸರ್ಕಾರದ ಬಳಿ ಕೋರಿದ್ದೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ತಿಳಿಸಿದರು.
ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಫೆ.25 ರ ಮಂಗಳವಾರದಂದು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಶಿವಮೊಗ್ಗ ಆಗಮಿಸುತ್ತಿರುವುದು ನಮಗೆ ಸಂತೋಷ ತಂದಿದೆ. ಈ ಹಿನ್ನಲೆ ಆಶ್ರಯ ಮನೆಗಳ ಇನ್ನುಳಿದ ವ್ಯವಸ್ಥೆಯನ್ನು ವೇಗವಾಗಿ ಮಾಡಲಾಗುವುದು. ಆದಷ್ಟು ಬೇಗ ಇದಕ್ಕೆ ಬೇಕಾದ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡುವ ಕೆಲಸ ಆಗಲಿ. ಆಶ್ರಯ ಮನೆಯ ಯೋಜನೆಯಲ್ಲಿ ಮನೆ ಮಾತ್ರವಲ್ಲದೆ ಅಗತ್ಯ ಸೌಲಭ್ಯಗಳನ್ನು ಸರ್ಕಾರ ನೀಡಬೇಕು ಎಂದು ಒತ್ತಾಯ ಮಾಡಿದರು. ಈಗ ನೀಡುತಿರುವ 625 ಮನೆಮನೆಗಳಲ್ಲಿ ಜನರಿಗೆ ಬೇಕಾದ ಅಗತ್ಯ ಸೌಲಭ್ಯಗಳಾದ ಬಸ್ಸಿನ ಸೌಲಭ್ಯ, ಆಸ್ಪತ್ರೆ ಸೌಲಭ್ಯ, ಶಾಲೆಯ ಸೌಲಭ್ಯ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ ಎಂದರು.
ಗುತ್ತಿಗೆ ದಾರರು ಬೇಗ ಮನೆಯನ್ನು ಪೂರ್ಣ ಗೊಳಿಸಿಕೊಡಬೇಕೆಂಬುದು ನಮ್ಮ ಕೋರಿಕೆ. 2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 3000 ಮನೆಗಳನ್ನು ಕಟ್ಟಲು ಆದೇಶಿಸಿದ್ದರು. ಆದರೆ ಮಧ್ಯದಲ್ಲಿ ಬಂದ ಸರ್ಕಾರಗಳು ಇದರ ಬಗ್ಗೆ ಹೆಚ್ಚಿನ ಗಮನ ವಹಿಸಲಿಲ್ಲ. ಬರಿ ಮನೆ ಕೊಡುವುದಷ್ಟೇ ಅಲ್ಲದೆ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಕೋರಿದ್ದೇವೆ.ಕುಟುಂಬದೊಂದಿಗೆ ಫಲಾನುಭವಿಗಳು ಈ ಕಾರ್ಯಕ್ರಮಕ್ಕೆ ಭಾಗವಹಿಸಬೇಕು. ಫಲಾನುಭವಿಗಳಿಗೆ ಅಂದು ಕಾರ್ಯಕ್ರಮಕ್ಕೆ ಆಗಮಿಸಲು ಕಾರ್ಪೋರೇಶನ್ ವತಿಯಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು. ಬೀಗದ ಕೀಯೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಅಂದು ನೀಡಲಾಗುವುದು. ನೀರಿನ ವ್ಯವಸ್ಥೆಯನ್ನು ಈಗ ತಾತ್ಕಾಲಿಕವಾಗಿ ಮಾಡಿದ್ದೇವೆ. ಜೂನ್ ತಿಂಗಳಲ್ಲಿ ಅದರ ಕಾಮಗಾರಿಯನ್ನು ಪೂರ್ಣಗೊಳಿಸುತ್ತೇವೆ ಎಂದರು.
SUMMARY | Congress district president R Prasanna Kumar said, “We have requested the government not only to provide shelter homes but also to provide basic amenities to them.
KEYWORDS | Congress, R Prasanna Kumar, government, provide shelter,