SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 12, 2024
ಶಿವಮೊಗ್ಗ | ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್ ಹೋಟೆಲ್ ಬಳಿ ನಡೆದಿದೆ.
ಇಲ್ಲಿನ ಸ್ಥಳೀಯ ನಿವಾಸಿ, ಶ್ರೀರಂಗ ಎಂಬುವವರಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ .
SUMMARY| a man was stabbed after a dispute over property Gaurav Hotel in Shivamogga.
KEY WORDS | a man was stabbed after a dispute over property Gaurav Hotel in Shivamogga.