SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 27, 2025
ಇನ್ಮುಂದೆ ರಾಜ್ಯದ ಹೋಟೆಲ್‌ಗಳಲ್ಲಿ ಇಡ್ಲಿಸೇರಿದಂತೆ ಇನ್ನಿತರೆ ಉಪಹಾರವನ್ನು ತಯಾರಿಸುವಾಗ ಪ್ಲಾಸ್ಟಿಕ್ ಕವರ್‌ಗಳನ್ನು ಬಳಕೆ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ ಗುಂಡೂರಾವ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಒಂದನ್ನ ಶೇರ್ ಮಾಡಿರುವ ಅವರು ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕವಾಗಿದೆ. ಆದ್ದರಿಂದ ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದು ಬರೆದುಕೊಂಡಿದ್ದಾರೆ.
ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ.… pic.twitter.com/LFGfVmRavU
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 27, 2025
ಈ ಹಿಂದೆಯೂ ಸಹ ರಾಜ್ಯದಲ್ಲಿ ಗೋಬಿ ಮಂಚೂರಿ ಹಾಗು ಕಬಾಬ್ ತಯಾರಿಕೆಗೆ ಕಲರ್ ಬಳಸುವಂತಿಲ್ಲ ಎಂಬ ಆದೇಶವನ್ನು ಆರೋಗ್ಯ ಇಲಾಖೆ ಹೊರಡಿಸಿತ್ತು. ಅಷ್ಟೇ ಅಲ್ಲದೆ ಕಲರ್ ಬಳಸಿದರೆ 10 ಲಕ್ಷದ ವರೆಗೆ ದಂಡ ವಿಧಿಸಲಾಗುವುದು ಘೋಷಿಸಿತ್ತು. ಇದೀಗ ಉಪಹಾರ ತಯಾರಿಕೆ ವೇಳೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಿದ್ದು, ಅದನ್ನು ಬಳಸಿದರೆ ಕಾನೂನು ರೀತಿಯಲ್ಲಿ ಯಾವ ಶಿಕ್ಷೆಯನ್ನು ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
SUMMARY | Health Minister Gundu Rao has issued an order banning the use of plastic covers while preparing idlis and other snacks in hotels in the state.
KEYWORDS | Health Minister, Gundu Rao, plastic covers, idli,