SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 22, 2024
ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆ ಪೊಲೀಸರು ಪ್ರಚೋದನಕಾರಿ ಪೋಸ್ಟ್‌ಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುತ್ತಿರುವ ಯುವಕನ ವಿರುದ್ಧ ಸುಮುಟೋ ಕೇಸ್ ದಾಖಲಿಸಿದ್ದಾರೆ.
ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಸಂಬಂಧವಾಗಿ ಗಸ್ತು ತಿರುಗುತ್ತಿದ್ದ ವೇಳೆ ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ರೀತಿಯಲ್ಲಿ ವಿಡಿಯೋಗಳನ್ನ ಎಡಿಟ್ ಮಾಡಿ ಪೋಸ್ಟ್ ಮಾಡಿರುವುದು ಕಂಡುಬಂದಿದೆ. ಈ ಸಂಬಂಧ ಪರಿಶೀಲನೆ ನಡೆಸಿದ ಪೊಲೀಸ್ ಸಿಬ್ಬಂದಿ ಠಾಣೆಯಲ್ಲಿ ಸುಮುಟೋ ಕೇಸ್ ದಾಖಲಿಸಿದ್ದಾರೆ.
ಇನ್‌ಸ್ಟಾಗ್ರಾಂ ವಿಡಿಯೋವನ್ನು ಅವಲೋಕಿಸಿರುವ ಪೊಲೀಸರು : THE BHARATIYA NYAYA SANHITA (BNS), 2023 (U/s-353(2),353(3)) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.