SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 25, 2024 EGG FOR CHILDREN | ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 56 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಇವತ್ತಿನಿಂದ ವಾರದ ಆರು ದಿನ ಮೊಟ್ಟೆ ಪೂರೈಸಲಿದೆ. ಈ ಯೋಜನೆಗೆ ಇವತ್ತಿನಿಂದ ಚಾಲನೆ ನೀಡಲಾಗಿದೆ.
ಯಾದಗಿರಿ ಜಿಲ್ಲೆ ಅರಕೇರಾ ಕೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಮೂಲಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಲಿದ್ದಾರೆ.
ಸರ್ಕಾರ ಎರಡು ದಿನ ಮೊಟ್ಟೆ ಪೂರೈಸಿದರೆ, ಉಳಿದ ನಾಲ್ಕು ದಿನ ಅಜೀಂ ಪ್ರೇಮ್ಜಿ ಫೌಂಡೇಷನ್ ನೀಡಲಿದೆ.
ಈ ಸಂಬಂಧ ಮೂರು ವರ್ಷ ಮೊಟ್ಟೆ ಪೂರೈಸಲು ₹1,500 ಕೋಟಿ ನೆರವು ನೀಡಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಷನ್ ನಡುವೆ ಜುಲೈನಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ.
