SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 7, 2024 ಶಿವಮೊಗ್ಗ ಮೆಸ್ಕಾಂ ಇವತ್ತು ಅಂದರೆ ಅಕ್ಟೋಬರ್ ಏಳರಂದು ಶಿವಮೊಗ್ಗದ ವಿವಿದೆಡೆ ಪವರ್ ಕಟ್ ಇರಲಿದೆ ಎಂದು ಪ್ರಕಟಣೆ ನೀಡಿದೆ.
ಶಿವಮೊಗ್ಗ ಆಲ್ಕೋಳ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 07 ರಂದು ಬೆಳಗ್ಗೆ 9.00 ರಿಂದ ಸಂಜೆ 5.30ರವರೆಗೆ ಎಂ.ಎಂ.ಎಸ್. ಲೇಔಟ್, ಬೋವಿ ಕಾಲೋನಿ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್, ಸೋಮಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
———————-
ಜನಸಂಪರ್ಕ ಸಭೆ
ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-1, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸ್ಕಾಂ, ಶಿವಮೊಗ್ಗ ಕಚೇರಿಯಲ್ಲಿ ದಿನಾಂಕ 08.10.2024 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಈ ಸಭೆಯಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಸಭೆಯಲ್ಲಿ ಗ್ರಾಹಕರಿಂದ ಮೆಸ್ಕಾಂ ವಿದ್ಯುತ್ ಸಂಬಂಧಿತ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಆದ್ದರಿಂದ ಶಿವಮೊಗ್ಗ ನಗರ ಉಪವಿಭಾಗ-1 ರ ಘಟಕ-1, 2 ಮತ್ತು 3 ರ ವ್ಯಾಪ್ತಿಯ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.