ಇವತ್ತು ಎಲ್ಲೆಲ್ಲಿ ಮಳೆಯಾಗಲಿದೆ! ಹವಾಮಾನ ಇಲಾಖೆ ಹೇಳಿದ್ದೇನು? |

ಹಂಚಿಕೊಳ್ಳಿ
WhatsApp Facebook X Telegram
ಇವತ್ತು ಎಲ್ಲೆಲ್ಲಿ ಮಳೆಯಾಗಲಿದೆ! ಹವಾಮಾನ ಇಲಾಖೆ ಹೇಳಿದ್ದೇನು? |

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 1, 2025 ‌‌ ‌

ವಿಶ್ವವಸು ಸಂವತ್ಸರದ ಆಗಮನದ ಬೆನ್ನಲ್ಲೆ ಮಳೆಯ ಆಗಮನದ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಬೆಂಗಳೂರು ನೀಡಿದೆ. 

ಈ ಸಂಬಂದ ಹವಾಮಾನ ಇಲಾಖೆ ಬೆಂಗಳೂರು ಬಿಡುಗಡೆ ಮಾಡಿರುವ ಬುಲೆಟಿನ್‌ ಪ್ರಕಾರ, ಇವತ್ತು ಅಂದರೆ ಮಂಗಳವಾರ ರಾಜ್ಯದ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ 

ಎಲ್ಲೆಲ್ಲಿ ಮಳೆಯಾಗಲಿದೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ , ಮೈಸೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

40 ಕಿಲೋಮೀಟರ್‌ ಸ್ಪೀಡ್‌ನಲ್ಲಿ ಬೀಸಲಿದೆ ಗಾಳಿ

ಗುಡುಗು ಸಿಡಿಲು ಜೊತೆಗೆ ಕೇವಲ ಮಳೆಯಷ್ಟೆ ಅಲ್ಲದೆ, ರಭಸದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಾಳಿಯ ವೇಗ ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ. ಇರಲಿದೆ.  ರಭಸದ ಗಾಳಿಯೊಂದಿಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಉಳಿದಂತೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಒಳಗೊಂಡು ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ. ಮುಂದಿನ ನಾಲ್ಕು ದಿನ ಇದೇ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಹಂಚಿಕೊಳ್ಳಿ
WhatsApp Facebook X Telegram
13
ಲೇಖಕರ ಬಗ್ಗೆ

13

Malenadu Today Contributor