ಇವತ್ತು ಶಿವಮೊಗ್ಗದ ಹಲವೆಡೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಇರಲ್ಲ ಕರೆಂಟ್‌

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 14, 2025

ಶಿವಮೊಗ್ಗ | ಶಿವಮೊಗ್ಗ ಮಂಡ್ಲಿ ವಿ.ವಿ.ಕೇಂದ್ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ನಿಮಿತ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 15 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಈ ಕೆಳಗೆ ನಮೂದಿಸಿರುವ ಸ್ಥಳಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಕುರಿತು ಮೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

- Advertisement -

ಮದರಿಪಾಳ್ಯ, ಊರುಗಡೂರು, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಇನ್ನೊಂದೆಡೆ ಫೆಬ್ರವರಿ 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.15 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕೊಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

SUMMARY | Feb. There will be a power outage at the following places from 10.00 am to 5.00 pm on The 15th

KEYWORDS | power outage, electric pole, shimoga, mescom,

Share This Article