SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 23, 2024
ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪರಿಗೆ ಇದೀಗ ಬಿಜೆಪಿಯ ಇನ್ನೊಬ್ಬ ಮುಖಂಡರ ಬೆಂಬಲ ಸಿಕ್ಕಿದೆ. ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪನವರಿಗೆ ಬಿಜೆಪಿಯಲ್ಲಿ ಅನ್ಯಾಯವಾಗಿದೆ. ಆ ಅನ್ಯಾಯವನ್ನು ಸರಿಪಡಿಸಿ ಮುಂದಿನ ದಿನಗಳಲ್ಲಿ ಅವರನ್ನು ಮತ್ತೆ ಬಿಜೆಪಿಗೆ ಕರೆದುಕೊಂಡು ಹೋಗುತ್ತೇವೆ ಅಂತಾ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಅಲ್ಲದೆ ಕೆಎಸ್ ಈಶ್ವರಪ್ಪರನ್ನ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎಂದಿದ್ದಾರೆ. ಅವರನ್ನ ಬಿಟ್ಟುಕೊಡುವ ಮಾತೇ ಇಲ್ಲ ಎಂದಿದ್ದಾರೆ.
ಮೊನ್ನೆ ಶನಿವಾರ ಬಾಗಲಕೋಟೆಯಲ್ಲಿ ಭಂಡಾರ ಸಂಸ್ಕೃತಿ ಉತ್ಸವದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕೆಎಸ್ ಈಶ್ವರಪ್ಪ ಇಬ್ಬರು ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಯತ್ನಾಳ್, ಕಿತ್ತೂರು ರಾಣಿ ಚನ್ನಮ್ಮ ವಂಶಸ್ಥರಾದ ನಾವು ಪಂಚಮಸಾಲಿಗಳು ಗಟ್ಟಿಯಾಗಿ ನಿಮ್ಮ ಬೆನ್ನಹಿಂದೆ ನಿಲ್ಲುತ್ತೇವೆ. ನಿಮ್ಮನ್ನು ಮುಖ್ಯಮಂತ್ರಿ ಮಾಡಿ ನಾನು ಸಚಿವನಾಗುತ್ತೇನೆ ಎಂದು ಈಶ್ವರಪ್ಪಿಗೆ ಆಶ್ವಾಸನೆ ನೀಡಿದರು
ಶೀಘ್ರದಲ್ಲಿಯೇ RCB ಗೆ ಚಾಲನೆ
ಇನ್ನೂ ಇದೇ ವೇಳೆ ಮಾತನಾಡಿದ ಕೆಎಸ್ ಈಶ್ವರಪ್ಪ ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ಆರ್‌ಸಿಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್) ಅಸ್ತಿತ್ವಕ್ಕೆ ಬರಲಿದೆ ಎಂದು ಘೋಷಿಸಿದರು