ಈ ಥರ ಮೋಸ ನಿಮಗೂ ಆಗಬಹುದು ಎಚ್ಚರ | ದುಡ್ಡು ಕೊಟ್ಟರೆ ಕೆಟ್ಟಿರಿ

This Article Written by / 13 / ಮಾರ್ಚ್ 15, 2025

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 14, 2025 ‌‌ ‌‌

ಸಾಫ್ಟ್‌ವೇ‌ರ್ ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಆದೇಶ ಕಾಪಿ ನೀಡಿ ಶಿವಮೊಗ್ಗದ ಯುವಕನೊಬ್ಬನಿಗೆ (ಹೆಸರು ಗೌಪ್ಯ) 2.10 ಲಕ್ಷ ರೂಪಾಯಿ ವಂಚಿಸಲಾಗಿದೆ.ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ FIR ಸಹ ದಾಖಲಾಗಿದೆ. 

ಸಂತ್ರಸ್ತ ಯುವಕನ ಸ್ನೇಹಿತನೊಬ್ಬನ ಕಡೆಯಿಂದ ಹೈದರಾಬಾದ್‌ನ ಮಹೇಶ್‌ ಎಂಬಾತ ಪರಿಚಯವಾಗಿದ್ದ. ಆತ ಯುವಕನಿಗೆ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಈ ಕುರಿಯಾಗಿ ಹಂತ-ಹಂತವಾಗಿ ಹಣ ಪಡೆದು 2023ರ ಡಿಸೆಂಬರ್‌ನಲ್ಲಿ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ನೇಮಕಾತಿ ಪತ್ರ ಕಳುಹಿಸಿದ್ದ. 

ಆದರೆ ಪರಿಶೀಲನೆ ವೇಳೆ ನೇಮಕಾತಿ ಆದೇಶ ನಕಲಿ ಎಂಬುದು ಯುವಕನಿಗೆ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಮಹೇಶ್‌ಗೆ ಕರೆ ಮಾಡಿ ಹಣ ಹಿಂತಿರುಗಿಸುವಂತೆ ತಿಳಿಸಿದ್ದ. ಆದರೆ ಈವರೆಗೂ ಆತ ಹಣ ಹಿಂತಿರುಗಿಸದ ಹಿನ್ನೆಲೆಯಲ್ಲಿ ಯುವಕ ದೂರು ನೀಡಿದ್ದಾನೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

 

ಮುಂದಿನ ಸುದ್ದಿ ಒದಿ

Leave a Comment