SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 31, 2024
ಇದೇ ಜನವರಿ 8 ಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ 39ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನಲೆ ಅವರ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬಆಚರಿಸಲು ಕಾತರಿಂದ ಕಾದುಕುಳಿತಿದ್ದರು. ಆದರೆ ಯಶ್ ಈ ಬಾರಿ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂಬ ಪೋಸ್ಟ್‌ನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅಭಿಮಾನಿಗಳಿಗೆ ನಿರಾಸೆಯನ್ನು ಉಂಟುಮಾಡಿದ್ದಾರೆ.
ಪತ್ರದಲ್ಲಿ ನಾನು ಈ ಬಾರಿ ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ ಎಂದು ಬರೆದುಕೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ 2018 ರಿಂದಲೂ ಸಹ ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಮಾಡಿಲ್ಲ. ಈ ಭಾರಿಯೂ ಸಹ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೇ ಇರುವುದು ಅವರ ಅಭಿಮಾನಿಗಳಿಗೆ ನಿರಾಸೆಯನ್ನುಂಟುಮಾಡಿದೆ.
SUMMARY | In the meantime, Yash posted a post on social media saying that he is not celebrating his birthday this time.
KEYWORDS | Yash, social media, birthday,