SHIVAMOGGA | MALENADUTODAY NEWS | ಮಲೆನಾಡು ಟುಡೆ Jan 19, 2025
ಶಿವಮೊಗ್ಗದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆ ಅನುಷ್ಟಾನಗಳ ವಿವರಣೆಯನ್ನು ಓದುಗರು ಇಲ್ಲಿ ಗಮನಿಸಬಹುದು
ಸುದ್ದಿ 1 | ಸಂಕ್ರಾಂತಿ ಸಮ್ಮಿಲನ: ಗೋಪಾಳದ ಬ್ರಾಹ್ಮಣ ಸೇವಾ ಸಂಘ, ಲಲಿತಾ ಮಹಿಳಾ ಸಂಘದ ಸಹಯೋಗದಲ್ಲಿ ಜ.19 ರಂದು ಸಂಜೆ 5.30ಕ್ಕೆ ಚಾಲುಕ್ಯ ನಗರದ ಸುರಭಿ ಸಮುದಾಯ ಭವನದಲ್ಲಿ ಸಂಕ್ರಾತಿ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ದಿನ ಸಂಜೆ 5.30ಕ್ಕೆ ಶ್ರೀನಿಕೇತನ ಭಜನಾ ಮಂಡಳಿ ಗೋಪಾಳ, ಶ್ರೀ ರಾಗರಂಜನಿ ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯಲಿದೆ ಎಂದು ಗೋಪಾಳ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಸುರೇಶ ಉಮರಾಣಿ ತಿಳಿಸಿದ್ದಾರೆ.
ಸುದ್ದಿ 2 | ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ
ಜನವರಿ 21 ರಿಂದ ಜ. 31 ರವರೆಗೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರವನ್ನು, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ.
ವಿವರ : ಜ. 21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. ಹೊಸನಗರ ಸಂಯುಕ್ತ ಆಸ್ಪತ್ರೆ, ನಗರ, ದೂ.ಸಂ: 9731922693. ಜ. 22 ರಂದು ತೀರ್ಥಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಟಗಾರು, ದೂ.ಸಂ 9480767638.ಜ. 24 ರಂದು ಭದ್ರಾವತಿಯ ಸಮುದಾಯ ಆರೋಗ್ಯ ಕೇಂದ್ರ ಹೊಳೆಹೊನ್ನೂರು, ದೂ.ಸಂ: 7899137243. ಜ.28 ರಂದು ಶಿವಮೊಗ್ಗದ ಸಮುದಾಯ ಆರೋಗ್ಯ ಕೇಂದ್ರ ಆಯನೂರು, ದೂ.ಸಂ: 9980150110.ಸೊರಬದಲ್ಲಿ ಸಾರ್ವಜನಿಕ ಆಸ್ಪತ್ರೆ ಸೊರಬ, ದೂ.ಸಂ: 9110493122. ಜ.31 ರಂದು ಶಿಕಾರಿಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾರಗೊಪ್ಪ, ದೂ.ಸಂ: 9741161346 ಇಲ್ಲಿ ಶಿಬಿರ ನಡೆಸಲಾಗುತ್ತದೆ.60 ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಶಿಬಿರಕ್ಕೆ ಹಾಜರಾಗಲು ವಯಸ್ಸಿನ ಸಂಬಂಧ ಜನ್ಮ ದಿನಾಂಕ ನಮೂದಾಗಿರುವ ದಾಖಲಾತಿ ಅಂದರೆ ಇಲಾಖೆಯಿಂದ ವಿತರಿಸಲಾದ ಹಿರಿಯ ನಾಗರಿಕ ಗುರುತಿನ ಚೀಟಿ, ಪಾನ್ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶಾಲಾ/ ಕಾಲೇಜು ದಾಖಲಾತಿ ಹಾಗೂ ಆಧಾರ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಸಲಹೆ ಮತ್ತು ಮಾಹಿತಿ ಕೇಂದ್ರ ದೂ.ಸಂ. 08182251676, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂ:08182222382, ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರ ದೂ.ಸಂ:08182221188, ಅಂಗವಿಕಲರ ಪುನರ್ವಸತಿ ಕೇಂದ್ರ ದೂ.ಸಂ: 08182488438, ಮೊ;8088620178 ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಸುದ್ದಿ 3 | ತರಕಾರಿ ಬೀಜ ವಿತರಣೆ
ಈ ವಿಚಾರಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ತಾಲೂಕಿನ ವಿವಿಧ ವರ್ಗಗಳ ರೈತರಿಂದ ತೋಟಗಾರಿಕೆ ಇಲಾಖೆಯು ಅರ್ಜಿ ಆಹ್ವಾನಿಸಿದೆ. 2024-25 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯ ತರಕಾರಿ ಬೀಜಗಳ (ಹೈಬ್ರಿಡ್ ಹಾಗೂ ಸುಧಾರಿತ ತಳಿ) ವಿತರಣೆ ಕಾರ್ಯಕ್ರಮದಡಿ ತರಕಾರಿ ಬೀಜಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.ಶಿವಮೊಗ್ಗ ತಾಲೂಕು ವ್ಯಾಪ್ತಿಯ, ತೋಟ-ಜಮೀನಿನಲ್ಲಿ ನೀರಾವರಿ ಸೌಲಭ್ಯ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತರಿಗೆ ತರಕಾಗಿ ಬೀಜ ವಿತರಿಸಲಾಗುತ್ತದೆ.
ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್, ಬ್ಯಾಂಕ್ ಪಾಸ್ಬುಕ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರಿಗೆ ದಿ: 31-01-2025 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
SUMMARY | Shivamogga upcoming news
KEY WORDS |Shivamogga upcoming news