SHIVAMOGGA | MALENADUTODAY NEWS | ಮಲೆನಾಡು ಟುಡೆ Dec 31, 2024
ವರ್ಷದ ಕೊನೆಯ ದಿನ ಕೊಟ್ಪಾ ಕಾಯಿದೆ ಉಲ್ಲಂಘನೆಯ ಅನ್ವಯ 19 ಪ್ರಕರಣಗಳನ್ನ ದಾಖಲಿಸಲಾಗಿದೆ. ಈ ಸಂಬಂಧ ಇವತ್ತು ಅಂದರೆ, ದಿನಾಂಕ 31.12.2024 ರಂದು ಶಿವಮೊಗ್ಗ ನಗರದ ಎಂ.ಆರ್.ಎಸ್ ವೃತ್ತದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು ದಾಳಿ ನಡೆಸಿದರು.
ಈ ವೇಳೆ ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ರೂಪಾಯಿ 3460 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ಹಾಗೂ ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು. ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ಹಾಗು ಸೇವನೆ ಮಾಡುವವರಿಗೆ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗು ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು. ತಂಡದಲ್ಲಿ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ನಾಗರಾಜ್ ನಾಯಕ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ ಏ ಒ, ಸಮಾಜ ಕಾರ್ಯಕರ್ತ ರವಿರಾಜ್, ಡಿಇಓ ಪ್ರವೀಣ್, ಮಂಜುನಾಥ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
SUMMARY | District survey officers conducted raids against those violating the COTPA Act in MRS Circle.
KEY WORDS | District survey officers conducted raids , violating the COTPA Act ,MRS Circle