SHIVAMOGGA | MALENADUTODAY NEWS | ಮಲೆನಾಡು ಟುಡೆ Oct 21, 2024
ಶಿವಮೊಗ್ಗ | ಹವಾಮಾನ ಇಲಾಖೆ ಬೆಂಗಳೂರು ಇವರ ಮಾಹಿತಿ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಅಂದರೆ 22 ನೇ ತಾರೀಖು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಹಾಗಾಗಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ
ನಿನ್ನೆದಿನ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಇವತ್ತು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ /ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಎನ್ಡಿಆರ್ಎಫ್ ಆಪ್ ಪ್ರಕಾರ, ಇವತ್ತು ಶಿವಮೊಗ್ಗದಲ್ಲಿ ಬೆಳಗ್ಗೆ ಒಂಬತ್ತು ಗಂಟೆಯಿಂದ ಸಂಜೆಯವರೆಗೂ ಭಾರೀ ಮಳೆಯ ಮನ್ಸೂಚನೆ ನೀಡಲಾಗಿದೆ. ಗರಿಷ್ಟ 31 ಡಿಗ್ರಿ ಸೆಲ್ಸಿಯಸ್, ಕನಿಷ್ಟ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ ಎಂದು ತಿಳಿಸಲಾಗಿದ್ದು, ಭಾರೀ ಮಳೆಯ ಮನ್ಸೂಚನೆ ಇದೆ.
SUMMARY | According to the India Meteorological Department (IMD), Bengaluru, an orange alert has been issued in Shivamogga district today. A yellow alert has been sounded on The 22nd and there is a possibility of heavy rains in the next two days
KEYWORDS | India Meteorological Department (IMD), Bengaluru, an orange alert in Shivamogga district, yellow alert, heavy rains in the next two days