SHIVAMOGGA | MALENADUTODAY NEWS | Sep 5, 2024
ವೈದ್ಯರ ಬಳಿಗೆ ಹೋಗುವ ವೇಳೆ ಬೈಕ್ ಬ್ಯಾಲೆನ್ಸ್ ತಪ್ಪಿ ವಕ್ತಿಯೊಬ್ಬರು ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ಬುಧವಾರ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ನಡೆದಿದೆ. ಇಲ್ಲಿನ ಕೌದಳ್ಳಿ ಹತ್ತಿರ ಹೊಸಗದ್ದೆಯ ಯುವಕ ಸಂತೋಷ ಸಾವನ್ನಪ್ಪಿದವರು
ಸಂತೋಷ್‌ರವರಿಗೆ ನಿನ್ನೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ವೈದ್ಯರಿಗೆ ತೋರಿಸಲು ತಮ್ಮ ಸ್ಕೂಟಿಯಲ್ಲಿ ಹೊರಟಿದ್ದರು. ಈ ನಡುವೆ ಬೈಕ್ ಚಲಾಯಿಸಲಾಗದೇ ಹೊದಲದ ಬಳಿ ನಿಂತಿದ್ದರು. ಆನಂತರ ಮುಂದಕ್ಕೆ ಹೋದ ಅವರು ವಡ್ಡಿನಬೈಲ ಬಳಿ ಬೈಕ್‌ನಿಂದ ಬಿದ್ದಿದ್ದಾರೆ. ಅವರ ಮೇಲೆ ಸ್ಕೂಟಿಯು ಬಿದ್ದಿದೆ. ಪರಿಣಾಮ ಅವರು ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿ: ಹೊದಲದ ಕೌದಳ್ಳಿ ಸಮೀಪದ ಹೊಸಗದ್ದೆಯ ಯುವಕನೊಬ್ಬ ವಾಹನ ಚಲಾಯಿಸುವ ವೇಳೆಯೇ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ