SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 19, 2024
ಶಿವಮೊಗ್ಗ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪನವರು ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿಸೆಂಬರ್ 20 ರಂದು ಬೆ.9.30ಕ್ಕೆ ಶಿಕಾರಿಪುರಕ್ಕೆ ಆಗಮಿಸಲಿರುವ ಸಚಿವರು ಶಿಕಾರಿಪುರ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ 11.30 ಕ್ಕೆ ಸೊರಬ ಬ್ಲಾಕ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಸೊರಬ ಪ್ರಥಮ ದರ್ಜೆ ಕಾಲೇಜು ಹೆಚ್ಚುವರಿ ಹೊಸ ಕಟ್ಟಡ ಮತ್ತು ಗ್ರಂಥಾಲಯ ಹಾಗೂ ಇತರೆ ಕಾಮಗಾರಿಗಳ ಉದ್ಘಾಟನೆ ಸಾಮೂಹಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸೊರಬದ ಸಚಿವರ ಕಾರ್ಯಾಲಯದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಮತ್ತು ತಾಲೂಕು ಬಗರ್ ಹುಕುಂ ಸಮಿತಿ ಕಚೇರಿ ಉದ್ಘಾಟನೆ ಮಾಡಲಿದ್ದಾರೆ. ಸೊರಬದ ರಂಗಮಂದಿರದಲ್ಲಿ 2023-24ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರಚಾಲಿತ ಬೈಕ್ ವಿತರಣೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ನಿಗಮಗಳ ಫಲಾನುಭವಿಗಳಿಗೆ ಬೋರ್‌ವೆಲ್ ಪಂಪ್‌ಸೆಟ್ ವಿತರಣೆ ಮತ್ತು ಕಟ್ಟಡ ಕಾರ್ಮಿಕರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮ.03.30ಕ್ಕೆ ತಾಳಗುಪ್ಪ ಹೋಬಳಿಯ ಶಿರವಂತೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಾಮೂಹಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಅಂದು ಸೊರಬದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿ. 21 ರಂದು ಆನವಟ್ಟಿ ಪಟ್ಟಣ ಪಂಚಾಯಿತಿ ಆವರಣದಲ್ಲಿ ಆನವಟ್ಟಿ ಬ್ಲಾಕ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಆನವಟ್ಟಿ ಬಿ.ಸಿ.ಎಂ. ಹಾಸ್ಟೇಲ್ ಕಟ್ಟಡ ಮತ್ತು ಇತರೆ ಕಾಮಗಾರಿಗಳ ಉದ್ಘಾಟನೆ ಸಾಮೂಹಿಕ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ. ಮ.12.30ಕ್ಕೆ ಆನವಟ್ಟಿಯಿಂದ ರಸ್ತೆ ಮೂಲಕ ಬೆಂಗಳೂರು ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
SUMMARY | School Education and Literacy Department and District In-charge Minister Madhu Bangarappa will tour various taluks of the district on December 20 and 21.
KEYWORDS | Education minister, Madhu Bangarappa, shivamogga,