SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 6, 2024
ಶಿವಮೊಗ್ಗ | ನಾಳೆ ಪಕ್ಷದ ಕೋರ್ ಕಮಿಟಿ ಸಬೆ ನಡೆಯಲಿದ್ದು, ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೂ ತೆರೆ ಬೀಳಲಿದೆ ಎಂದು ಮಾಜಿ ಸಿ ಎಂ ಯಡಿಯೂರಪ್ಪ ಹೇಳಿದರು. ವಿನೋಬನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ, ಆ ಸಭೆಯಲ್ಲಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಚರ್ಚೆ ಆಗುತ್ತದೆಯೇ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ, ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ, ಇದಕ್ಕೆ ಯತ್ನಾಳ್ ರವರು ಒಪ್ಪಿಕೊಳ್ಳುತ್ತಾರೆ ಎಲ್ಲವೂ ಸರಿ ಹೋಗಲಿದೆ ಎಂಬ ಭರವಸೆ ನನಗೆ ಇದೆ. ನಾಳೆ ಈ ಕುರಿತ ಎಲ್ಲಾ ಗೊಂದಲಗಳಿಗೂ ತೆರೆಬಿದ್ದು ನಾವೆಲ್ಲ ಒಟ್ಟಾಗಿ ಹೋಗಲು ಸಾಧ್ಯವಾಗುತ್ತದೆ ಎಂಬ ಭರವಸೆ ನನಗೆ ಇದೆ ಎಂದರು.
ಯಡಿಯೂರಪ್ಪ ಹಾಗೂ ಅವರ ಪುತ್ರರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಮಾತುಗಳ ಬಗ್ಗೆ ನನಗೇನು ಅಭ್ಯಂತರ ಇಲ್ಲ ನನ್ನ ಉದ್ದೇಶ ನಾವೆಲ್ಲ ಒಟ್ಟಾಗಿ ಹೋಗಬೇಕೆಂಬುದು ಆಗಿದೆ. ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು ನಮ್ಮ ನಮ್ಮಲ್ಲಿ ಬಡದಾಡಿಕೊಳ್ಳುವುದು ನಮಗೆ ಹೆಚ್ಚು ಶಕ್ತಿಯನ್ನು ನೀಡುವುದಿಲ್ಲ. ಎಲ್ಲವನ್ನು ಮರೆತು ಒಟ್ಟಾಗಿ ಹೋಗುವ ಪ್ರಯತ್ನ ಮಾಡುತ್ತೇವೆ. ಮುಂಬರುವ ಅಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸಿ ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಬಯಲು ಮಾಡಿ ಅದಕ್ಕೆ ನ್ಯಾಯ ಕೊಡಿಸುತ್ತೇವೆ ಎಂದರು.
ನಂತರ ಮುಡಾ ಹಗರಣದ ಬಗ್ಗೆ ಮಾತನಾಡಿದ ಮಾಜಿ ಸಿ ಎಂ ಈಗಾಗಲೇ ಇ.ಡಿ ಸಿ ಎಂ,ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ. ಇವೆಲ್ಲವೂ ಮುಂಬರುವ ದಿನಗಳಲ್ಲಿ ಚರ್ಚೆ ಆಗಲಿದೆ ಈ ಕುರಿತು ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ನಾವೆಲ್ಲ ಒಟ್ಟಾಗಿ ಕುಳಿತು ನಾಳೆಯ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.
ವಿಜೇಂದ್ರ ರಾಜ್ಯಾಧ್ಯಕ್ಷರಾಗಿದ್ದು ಯಡಿಯೂರಪ್ಪನವರ ಹೆಸರಿನ ಮೇಲೆ ಎಂದು ರಮೇಶ್ ಜಾರಕಿಹೊಳಿ ನೀಡಿಕೆ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು,ಕೇಂದ್ರದ ನಾಯಕರು ಅವರು ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಡೀ ರಾಜ್ಯದ ಜನ ವಿಜಯೇಂದ್ರ ಅವರ ಓಡಾಟ ಮತ್ತು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಮೊನ್ನೆಯ ಮೂರು ಜಿಲ್ಲೆಗಳ ಪ್ರವಾಸದ ವೇಳೆ ಅವರಿಗೆ ಸಿಕ್ಕ ಜನ ಬೆಂಬಲ ಯಾವ ರೀತಿ ಇದೇ ಎಂಬುದನ್ನು ರಾಜ್ಯದ ಜನ ಗಮನಿಸಿದ್ದಾರೆ ಎಂದರು.
SUMMARY| Former CM BS Yediyurappa said that the party’s core committee meeting will be held tomorrow to put an end to all the confusion in the party.
KEYWORDS | Former CM BS Yediyurappa, core committee meeting, bjp, basanagowdapatilyathnal,