SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 27, 2024
ಸಂವಿಧಾನ ಪೀಠಿಕೆ ಓದುವುದು ರಾಜ್ಯದ ಎಲ್ಲಾ ಶಾಲಾ ಕಾಲೇಜು ಗಳಲ್ಲಿಯೂ ಕಡ್ಡಾಯ ಮಾಡಿದ್ದೇವೆ ಎಂದು ಸಿ ಎಂ ಸಿದ್ದರಾಮಯ್ಯ ತಿಳಿಸಿದರು.
ಅಂಬೇಡ್ಕರ್ ಸಂವಿಧಾನ ಎಲ್ಲಾ ಮಕ್ಕಳಿಗೂ ಅರ್ಥವಾಗಬೇಕು ಎನ್ನುವ ದೃಷ್ಟಿಯಿಂದ ಶಾಲಾ ಹಾಗೂ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದಿ ಸುತ್ತಿದ್ದೇವೆ. ಸಂವಿಧಾನ ಜಾರಿಗೆ ಬಂದು ಮುಂದಿನ ಜನವರಿಗೆ 75 ವರ್ಷ ತುಂಬುತ್ತದೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ಸಂವಿಧಾನದಡಿಯಲ್ಲೇ ನಡೆಯಬೇಕು ಎಂದರು.
ಹಲವು ಜನ ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಸುತ್ತಿದ್ದರು. ಜಗತ್ತಿನ ಅನೇಕ ರಾಷ್ಟ್ರಗಳ ಸಂವಿಧಾನದ ಅಭ್ಯಾಸ, ಅನುಭವದ ಆಧಾರದ ಮೇಲೆ ಸಂವಿಧಾನ ರಚನೆ ಮಾಡಲಾಗಿದೆ. ಇದು ಲಿಖಿತ ಸಂವಿಧಾನ ಇದಕ್ಕಿಂತ ಮೊದಲು ಅಲಿಖಿತ ಸಂವಿಧಾನ ಇತ್ತು. ಅದು ಒಬ್ಬರು ಮತ್ತೊಬ್ಬರನ್ನು ದ್ವೇಷಿಸುವ ರೀತಿ ಇತ್ತು ಎಂದರು.
ಸಂವಿಧಾನ ಎಷ್ಟೇ ಚೆನ್ನಾಗಿದ್ದರೂ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ಇದ್ದರೆ ಕೆಟ್ಟದಾಗುತ್ತೆ ಅಂತ ಬಿ ಆರ್ ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದರು.
SUMMARY | “We have made it mandatory for all schools and colleges in the state to read the Preamble of the Constitution,” Siddaramaiah said.
KEY WORDS | reamble of the Constitution, Siddaramaiah, kannadanews,